ಕಾಂಗ್ರೆಸ್-ಬಿಜೆಪಿ ನಡವಿನ ಕಾಳಗದಲ್ಲಿ ಕುಮಾರಸ್ವಾಮಿ ಎಂಟ್ರಿ, ಬೊಮ್ಮಾಯಿ ಸರ್ಕಾರಕ್ಕೆ ಶಾಕ್

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರದ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯೆ ಇದೀಗ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದು, ಸರ್ಕಾರದ ವಿರುದ್ಧ ಗುಡುಗಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆಪ್ಟೆಂಬರ್.12): ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರದ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

40% ಕಮಿಷನ್ ಸಮರ: ಹಿಂದಿನ ಸರ್ಕಾರದ ದಾಖಲೆ ಬಿಡುಗಡೆ ಮಾಡಲು ಸರ್ಕಾರ ಪ್ಲಾನ್!

ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹಲವು ಭ್ರಷ್ಟಾಚಾರದ ಆರೋಪಗಳನ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದಕ್ಕೆ ತಿರುಗೇಟು ನೀಡಲು ಬಿಜೆಪಿ ಸರ್ಕಾರ, ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ನಡೆದ ಹಗರಣ ಹಾಗೂ ಭ್ರಷ್ಟಾಚಾರಗಳನ್ನು ತನಿಖೆ ಮಾಡಲು ಮುಂದಾಗಿದೆ. ಇವರಿಬ್ಬರ ಮಧ್ಯೆ ಇದೀಗ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದು, ದಾಖಲೆ ದಾಖಲೆ ಅಂತಿದ್ದೀರಲ್ಲಾ... ಈಗ ಕೊಡ್ತೀನಿ ಎಂದು ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ.

Related Video