Asianet Suvarna News Asianet Suvarna News

ಸಿಂದಗಿ, ಹಾನಗಲ್‌ ಬೈ ಎಲೆಕ್ಷನ್‌ಗೆ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದು, ಎಚ್‌ಡಿಕೆ ವಾಕ್ಸಮರ

Oct 2, 2021, 3:49 PM IST

ಬೆಂಗಳೂರು,(ಅ.02) : ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ.ಈಗಾಗಲೇ ಜೆಡಿಎಸ್ ಎರಡೂ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಆ ಎರಡೂ ಕಡೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 

ಸಿಂಧಗಿ ಉಪಚುನಾವಣೆಗೆ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್

ಇದು ಒಂದು ರೀತಿಯಲ್ಲಿ ಬಿಜೆಪಿ ಪ್ಲಸ್ ಆಗಲಿದ್ದು, ಕಾಂಗ್ರೆಸ್‌ಗೆ ಮೈನಸ್ ಆಗಲಿದೆ ಎನ್ನುವುದು ರಾಜಕೀಯ ಪರಿಣಿತರ ಲೆಕ್ಕಾಚಾರವಾಗಿದೆ. ಕಾಂಗ್ರೆಸ್‌ ಮುಸ್ಲಿಂ ಮತಗಳನ್ನೇ ನಂಬಿದ್ದು, ಇದೀಗ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನೇ ಕಣಕ್ಕಿಳಿಸಿರುವುದು ಕೈಗೆ ಬಿಗ್ ಶಾಕ್‌ ಆದಂತಾಗಿದೆ. ಇನ್ನು ಈ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ.....