ಕರ್ನಾಟಕದಲ್ಲಿ ಬಿಜೆಪಿ ಗೆಲುವು ಪಕ್ಕಾ, ಅಮಿತ್ ಶಾ ಸಂದರ್ಶನಕ್ಕೆ ಹೆಚ್‌ಡಿಕೆ ಕಿಡಿ!
ಬಾದಾಮಿಯಲ್ಲಿ ಸ್ಪರ್ಧಿಸಿ, ಸಿದ್ದು ಬೆಂಬಲಿಗರ ಬಿಗಿ ಪಟ್ಟು, ಬಿಎಸ್ ಯಡಿಯೂರಪ್ಪಗೆ ಮಹತ್ವದ ಜವಾಬ್ದಾರಿ ನೀಡಿದ ಅಮಿತ್ ಶಾ, ಗೋಕಾಕ್‌ನಲ್ಲಿ ಹೆಬ್ಬಾಳ್ಕರ್ ಸ್ಪರ್ಧಿಸಿದರೆ ಗೆಲ್ಲಿಸುತ್ತೇವೆ, ಜೆಡಿಎಸ್ ನಾಯಕನ ಆಹ್ವಾನ, ಯಡಿಯೂರಪ್ಪ ಕಡೆಗಣನೆ ಆರೋಪಕ್ಕೆ ಬಿಜೆಪಿ ತಿರುಗೇಟು ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ನ್ಯೂಸ್ ಹವರ್ ಇಲ್ಲಿದೆ
ಕರ್ನಾಟಕದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಕರ್ನಾಟಕ ಭೇಟಿಯಲ್ಲಿ ಮೋದಿ ಅಲೆ ಇರುವುದು ಸ್ಪಷ್ಟವಾಗಿದೆ. ಇಷ್ಟೇ ಅಲ್ಲ ಕರ್ನಾಟಕದ ಜನರ ನಾಡಿ ಮಿಡಿತ ಅರಿತಿದ್ದೇವೆ ಎಂದು ಅಮಿತ್ ಶಾ ಸಂದರ್ಶನದಲ್ಲಿ ಹೇಳಿದ್ದಾರೆ. ಇದೇ ವೇಳೆ ಕುಟುಂಬ ರಾಜಕಾರಣಕ್ಕೆ ವಿರುದ್ದ ಹರಿಹಾಯ್ದಿದ್ದಾರೆ. ಇತರ ಪಕ್ಷದಂತೆ ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಅವಕಾಶವಿಲ್ಲ. ಕೆಲ ಪಕ್ಷಗಳು ತಮ್ಮ ಕುಟುಂಬಸ್ಥರಿಗೆ ಅಧ್ಯಕ್ಷ ಪಟ್ಟ ನೀಡುತ್ತಾರೆ. ಅವರ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಾರೆ. ಈ ಪರಿಪಾಠ ಬಿಜೆಪಿಯಲ್ಲಿ ಇಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಯಾವುದೇ ಪಕ್ಷದ ಹೆಸರು ಹೇಳಿಲ್ಲ. ಆದರೆ ಇದು ತಮಗೆ ಹೇಳಿರುವುದು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಅಮಿತ್ ಶಾ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.