ನ.15ಕ್ಕೆ ಪ್ರಮುಖ ನಾಯಕರು ಪಕ್ಷ ಸೇರ್ಪಡೆ, ಲೋಕಸಭೆ ಚುನಾವಣೆಗೆ ಡಿಕೆಶಿ ಹೊಸ ರಣತಂತ್ರ!
ನವೆಂಬರ್ 15 ರಂದು ಪ್ರಮುಖ ನಾಯಕರಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆ, ಡಿಕೆಶಿ ಸುಳಿವು, ಗ್ಯಾರೆಂಟಿಗೆ ಮರುಳಾಗಬೇಡಿ,ಡಿಕೆಶಿ ವಿರುದ್ದ ಹೆಚ್‌ಡಿಕೆ ಸತತ ವಾಗ್ದಾಳಿ, ಒಂದೇ ಕುಟುಂಬದ ನಾಲ್ವರ ಹತ್ಯೆ, ಉಡುಪಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ ಸೇರಿದಂತೆ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್, ಇತರ ಪಕ್ಷಗಳ ನಾಯಕರು, ಬಂಡಾಯ ನಾಯಕರನ್ನು ಕಾಂಗ್ರೆಸ್‌ಗೆ ಕರೆತರವು ಕಾರ್ಯಕ್ರಮಕ್ಕೆ ಮತ್ತಷ್ಟು ವೇಗ ನೀಡಲು ಮುಂದಾಗಿದ್ದಾರೆ. ನವೆಂಬರ್ 15 ರಂದು ಪ್ರಮುಖ ನಾಯಕರ ಕಾಂಗ್ರೆಸ್ ಪಕ್ಷ ಸೇರ್ಪಡೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎಬ್ಬಿಸಲು ಡಿಕೆಶಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ಹಾಗೂ ಹೆಚ್‌ಡಿ ಕುಮಾರಸ್ವಾಮಿ ನಡುವಿ ವಾಕ್ಸಮರ ಜೋರಾಗಿದೆ. ಇದೀಗ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿಗೆ ಮರಳಾಗಬೇಡಿ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ತಾತ್ಕಾಲಿಕ ಸಿಎಂ ಹಾಗೂ ನಕಲಿ ಸಿಎಂ ಮುಖಭಂಗ ಅನುಭವಿಸಿದ್ದಾರೆ ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇದಕ್ಕೆ ಡಿಕೆಶಿ ತಿರುಗೇಟು ನೀಡಿದ್ದಾರೆ.