ಬಿಜೆಪಿ-ಜೆಡಿಎಸ್ ಮೈತ್ರಿ: ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಕುಮಾರಸ್ವಾಮಿ ಮಾತು
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಬಿಜೆಪಿ(BJP) ಮತ್ತು ಜೆಡಿಎಸ್(JDS) ಮೈತ್ರಿ ವಿಚಾರ ಸಂಚಲನ ಮೂಡಿಸಿದೆ. ಸದ್ಯ ಮೂರು ಪಕ್ಷಗಳಲ್ಲೂ ಬೆಳವಣಿಗೆ ಆಗುತ್ತಿದೆ. ಮೈತ್ರಿ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಮಾತನಾಡಿದ್ದು, ಇದನ್ನು ಖಚಿತಪಡಿಸಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಅವರು, ಎಲ್ಲದಕ್ಕೂ ಸಮಯ ಬಂದಾಗ ಉತ್ತರ ಕೊಡುತ್ತೇನೆ. ಆರೋಗ್ಯ ಸಮಸ್ಯೆ ಹಿನ್ನೆಲೆ ಯಾವುದೇ ರೀತಿಯ ರಾಜಕೀಯ ಚಟುವಟಿಕೆಯಲ್ಲಿ ನಾನು ಭಾಗಿಯಾಗಿಲ್ಲ. ಈ ಬಗ್ಗೆ ಹಲವಾರು ನಾಯಕರ ಪ್ರತಿಕ್ರಿಯೆಯನ್ನು ನೋಡಿದ್ದೇನೆ ಎಂದು ಅವರು ಹೇಳಿದರು. ದೇವೇಗೌಡರಿಗೆ ಎಲ್ಲಾ ಪಕ್ಷದವರು ಗೌರವ ಕೊಡುತ್ತಾರೆ. ಇನ್ನೂ ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲ. ಇದು ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. 2018ರಲ್ಲಿ ಕಾಂಗ್ರೆಸ್ ಸೋತಾಗ ನಮ್ಮ ಬಾಗಿಲಿಗೆ ಬಂದಿತ್ತು. ಆಗ ಯಾವ ಅನ್ನ ಹಳಸಿತ್ತು, ಯಾರು ನಾಯಿ ಆಗಿ ಬಂದಿದ್ರು ಎಂಬುದನ್ನು ನೆನಪಿಸಿಕೊಳ್ಳುವುದು ಒಳ್ಳೆಯದು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ವೀಕ್ಷಿಸಿ: ಮಂಗಳೂರು ವಿವಿಯಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸ: ವಿರೋಧಿಸಿ ಎಬಿವಿಪಿ ಪ್ರತಿಭಟನೆ