
ಜೆಡಿಎಸ್‌ನಲ್ಲಿ ನಿಖಿಲ್- ಪ್ರಜ್ವಲ್ ಜುಗಲ್ಭಂಧಿ ಶುರು, ಇನ್ನೇನಿದ್ರೂ ಎಚ್‌ಡಿಕೆ ಆಟ..?
ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಮಿಷನ್ 123 ಗುರಿಯನ್ನಿಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಕಾರ್ಯಗಳನ್ನು ಕೈಗೊಂಡಿದೆ.
ಬೆಂಗಳೂರು (ಅ. 01): ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಮಿಷನ್ 123 ಗುರಿಯನ್ನಿಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಕಾರ್ಯಗಳನ್ನು ಕೈಗೊಂಡಿದೆ.
Add Asianetnews Kannada as a Preferred Source

ಈ ವೇದಿಕೆಯಲ್ಲಿ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಒಟ್ಟಿಗೆ ಕಾಣಿಸಿಕೊಂಡರು. ಜೊತೆಯಾಗಿ ರಾಜ್ಯ ಪ್ರವಾಸ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡುವುದಾಗಿ ಸಂಕಲ್ಪ ಮಾಡಿದರು. ಈ ಮೂಲಕ ತಮ್ಮಿಬ್ಬರ ನಡುವೆ ಭಿನ್ನಮತ ಇದೆ ಎಂದು ಬಿಂಬಿಸಿದ್ದವರಿಗೆ ತಮ್ಮೊಳಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶ ರವಾನಿಸಿದರು.
ಜನರ ಮನೆಮನ ಮುಟ್ಟುವ ನಿಟ್ಟಿನಲ್ಲೇ ಈಗಾಗಲೇ ಎಲ್ಲ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧತೆ ಮಾಡಿಕೊಂಡಿದ್ದೇವೆ. ಇದಕ್ಕೆ ಪೂರಕವಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರಿಬ್ಬರೂ ಜೊತೆಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ ಎಂದು ಎಚ್‌ಡಿಕೆ ಹೇಳಿದ್ಧಾರೆ.ನಿಖಿಲ್- ಪ್ರಜ್ವಲ್ ಜುಗಲ್ಬಂಧಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.