ಬಿಜೆಪಿ ಕಂಡವರ ಮಕ್ಕಳನ್ನ ಬಾವಿಗೆ ತಳ್ಳುತ್ತಿದೆ. ಕುಮಾರಸ್ವಾಮಿ ಕೆಂಡಾಮಂಡಲ
ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, (ಫೆ.10): ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Hijab Karnataka Breaking ಹಿಜಾಬ್-ಕೇಸರಿ ವಿವಾದಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಹೈಕೋರ್ಟ್
ಇಂದು(ಗುರುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ಕಂಡವರ ಮಕ್ಕಳನ್ನ ಬಾವಿಗೆ ತಳ್ಳುತ್ತಿದೆ. ಬಡಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸಿದೆ ಎಂದು ಕಿಡಿಕಾರಿದರು.