Asianet Suvarna News Asianet Suvarna News

ನಾನಿನ್ನೂ ಬದುಕಿದ್ದೇನೆ, ಮುಸ್ಲಿಮರನ್ನು ಉಳಿಸಿಕೊಳ್ತೀನಿ: ದೇವೇಗೌಡ ಖಡಕ್‌ ಮಾತು!

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಆದ ತಕ್ಷಣ ಮುಸ್ಲಿಮರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ನಾನಿನ್ನೂ ಬದುಕಿದ್ದೇನೆ, ಮುಸ್ಲಿಂ ಸಮುದಾಯವನ್ನು ನಮ್ಮ ಜೊತೆ ಉಳಿಸಿಕೊಳ್ಳುತ್ತೇವೆ. ಯಾವ ಆತಂಕ ಕೂಡ ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಬೆಂಗಳೂರು (ಸೆ.27): ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಆದ ತಕ್ಷಣ ಮುಸ್ಲಿಮರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ನಾನಿನ್ನೂ ಬದುಕಿದ್ದೇನೆ, ಮುಸ್ಲಿಂ ಸಮುದಾಯವನ್ನು ನಮ್ಮ ಜೊತೆ ಉಳಿಸಿಕೊಳ್ಳುತ್ತೇವೆ. ಯಾವ ಆತಂಕ ಕೂಡ ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಬಿಜೆಪಿ - ಜೆಡಿಎಸ್‌ ಮೈತ್ರಿ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಜಾತ್ಯಾತೀತ ಸಿದ್ಧಾಂತವನ್ನು ಗಾಳಿಗೆ ತೂರುವ ರಾಜಕಾರಣವನ್ನು ಯಾವತ್ತೂ ಮಾಡಿಲ್ಲ. ಬಿಜೆಪಿ ನಾಯಕರ ಜೊತೆ ಕದ್ದು ಮುಚ್ಚಿ ಮಾತನಾಡುವ ಅವಶ್ಯಕತೆ ನಮಗಿಲ್ಲ. ನಾವು ಯಾರಿಗೂ ಹೆದರಿಕೊಳ್ಳಬೇಕಾದ ಅನಿವಾರ್ಯತೆಯೂ ಇಲ್ಲ. ಕಳೆದ ಅರವತ್ತು ವರ್ಷಗಳಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಟ್ಟಿಲ್ಲ ಎಂದು ಹೇಳಿದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

Video Top Stories