Asianet Suvarna News Asianet Suvarna News

ಸಿಎಂ ಗಾದಿಗೆ ಟವೆಲ್ ಹಾಕಿದ ಮತ್ತೋರ್ವ ಕಾಂಗ್ರೆಸ್ ನಾಯಕ

Jun 27, 2021, 7:12 PM IST

ಮೈಸೂರು, (ಜೂನ್.27): ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕದನ ಮುಂದುವರೆದಿದೆ. ಇದರ ಮಧ್ಯೆ ಕಾಂಗ್ರೆಸ್‌ ನಾಯಕ ಎಂ.ಬಿ.ಪಾಟೀಲ್ ಸಹ ಮುಂದಿನ ಸಿಎಂ ಆಕಾಂಕ್ಷಿ ಎಂದು ಹೇಳುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚನ ಮೂಡಿಸಿದ್ದಾರೆ.

ಮುಂದಿನ ಸಿಎಂ ಸಿದ್ದರಾಮಯ್ಯ ಎಂದ ನಾಯಕರಿಗೆ ಬಿಗ್ ಶಾಕ್

ಕಾಂಗ್ರೆಸ್​ನಲ್ಲಿ ಎದ್ದಿರುವ ಮುಂದಿನ ಸಿಎಂ ವಿವಾದದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್, ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕೆನ್ನುವ ಆಸೆ ಇರುತ್ತೆ..ನಾನು ಸಹ ಮುಖ್ಯಮಂತ್ರಿ ಅಭ್ಯರ್ಥಿ ಅಂತ ಹೇಳಿದರು.