Party Rounds: ಊಹಾಪೋಹಗಳಿಗೆ ತೆರೆ ಎಳೆದ ಸೋಮಣ್ಣ! ಮಗನಿಗೂ ಬಿಜೆಪಿ ಟಿಕೆಟ್‌?

ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಪಕ್ಷದ ಕೆಲಸ ಮಾಡಿಕೊಂಡು ಇರುತ್ತೇನೆ ಹೊರತು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಪಕ್ಷದ ಕೆಲಸ ಮಾಡಿಕೊಂಡು ಇರುತ್ತೇನೆ ಹೊರತು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ಪುತ್ರ ಅರುಣ್ ಸೋಮಣ್ಣ ವೀಡಿಯೋ ಬಗ್ಗೆ ಮಾತನಾಡಿದ ಅವರು ಅರುಣ್ ಸೋಮಣ್ಣ ಪಕ್ಷದ ವಿರುದ್ಧ ನಡೆದುಕೊಂಡರೆ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳಲಿ. ನನ್ನ ಮಗ ಡಾಕ್ಟರ್. ಎಳೆ ಮಗು ಅಲ್ಲ. ಆತ ಮಾತಾಡಿರುವುದಕ್ಕೂ ನನಗೂ ಸಂಬಂಧ ಇಲ್ಲ ಎಂದಿದ್ದಾರೆ. ಈ ಹಿಂದೆ ಪಕ್ಷ ವಿರುದ್ಧ ಅವರು ಅಸಮಾಧಾನ ಹೊರ ಹಾಕಿದ್ದರು. ಪುತ್ರನಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಈ ಅಸಮಾಧಾನವಿತ್ತು. ಇದರ ಬೆನ್ನಲ್ಲೇ 2024ರ ಲೋಕಸಭಾ ಚುನಾವಣೆಗೆ ಪುತ್ರನಿಗೆ ಟಿಕೆಟ್ ನೀಡುವ ಭರವಸೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

Related Video