ವರುಣದಲ್ಲಿ ದೊಡ್ಡ ಅಂತರದಿಂದ ಗೆಲ್ಲುತ್ತೇನೆ: ಸಿದ್ದರಾಮಯ್ಯ

ವರುಣದಲ್ಲಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ
ಪ್ರಚಾರದ ಮೂಲಕ ಮಾಜಿ ಸಿಎಂ ಮತಬೇಟೆ
ವರುಣದಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಸಿದ್ದರಾಮಯ್ಯ

Share this Video
  • FB
  • Linkdin
  • Whatsapp

ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ವರುಣ ವಿಧಾನಸಭಾ ಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ವೇಳೆ ಸಿದ್ದು ದೇವಸ್ಥಾನಕ್ಕೆ ಸಹ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಿರೀಕ್ಷೆಗೂ ಮೀರಿ ನಮಗೆ ಜನರಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈ ಬಾರಿ ದೊಡ್ಡ ಅಂತರದಿಂದ ನಾನು ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೇವಸ್ಥಾನಕ್ಕೆ ಹೋದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಾನು ಅಲ್ಲಿಗೆ ಹೋಗುವುದಿಲ್ಲ ಎಂದೇನಿಲ್ಲ. ಆದ್ರೆ ಪದೇ ಪದೇ ಹೋಗುವುದಿಲ್ಲ. ದೇವರ ಹತ್ರ ನಾನು ಜನರಿಗೆಲ್ಲಾ ಒಳ್ಳೆಯದು ಮಾಡು ಎಂದು ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ನಾನು ಭೂತನೂ ಅಲ್ಲ, ಪಿಶಾಚಿಯೂ ಅಲ್ಲ, ನಾನು ಮನುಷ್ಯ: ಸಿದ್ದುಗೆ ಸೋಮಣ್ಣ ಟಾಂಗ್‌

Related Video