CP Yogeshwar VS DK Shivakumar: ಕನಕಪುರದಲ್ಲಿ ಡಿಕೆಶಿಗೆ ಯೋಗೇಶ್ವರ್ ಸವಾಲು, ಅಲ್ಲಿಂದಲೇ ಸ್ಪರ್ಧೆ.?

ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ (kanakapura) ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಮೇಲ್ಮನೆ ಸದಸ್ಯಸಿ.ಪಿ.ಯೋಗೇಶ್ವರ್‌ (CP Yogeshwar) ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 08): ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ (Kanakapura) ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಹೇಳುವ ಮೂಲಕ ಮೇಲ್ಮನೆ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ (CP Yogeshwar) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಟಾಂಗ್‌ ನೀಡಿದ್ದಾರೆ.

PM Security Breach: ಫ್ಲೈಓವರ್‌ನಲ್ಲಿ 20 ನಿಮಿಷ ಕಳೆದ ಮೋದಿ. ಪಂಜಾಬ್ ಸರ್ಕಾರದ ಪ್ರೀಪ್ಲ್ಯಾನ್.?

 ಡಿ.ಕೆ.ಶಿವಕುಮಾರ್‌ (DK Shivakumar) ಮತ್ತು ನನ್ನ ನಡುವೆ ಆರಂಭದಿಂದಲೂ ಕಿತ್ತಾಟ ಇದೆ. ನಾನು ಎಂದೂ ಡಿಕೆಎಸ್‌ ಸಹೋದರರ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ, ಮುಂದೆಯೂ ಮಾಡಿಕೊಳ್ಳುವುದಿಲ್ಲ. ಅವರ ಜೊತೆ ಹೋಗುವುದು ಇರುಳು ಕಂಡ ಬಾವಿಯಲ್ಲಿ ಹಗಲು ಬಿದ್ದಂತಾಗುತ್ತದೆ ಎಂದು ಎಂಎಲ್ಸಿ ಯೋಗೇಶ್ವರ್‌ ವ್ಯಂಗ್ಯವಾಡಿದ್ದಾರೆ. ಕಳೆದ 25 ವರ್ಷಗಳಿಂದ ಅವರು ನನಗೆ ಕಿರುಕುಳ ಕೊಟ್ಟು ಕೊಂಡು ಬಂದಿದ್ದಾರೆ. ಅವರ ಜೊತೆಗೆ ನಾನು ಹೇಗೆ ಹೋಗಲಿ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಯಾವ ಕಾರಣಕ್ಕೂ ಪಕ್ಷ ಬಿಡುವುದಿಲ್ಲ, ವರಿಷ್ಠರು ಸೂಚಿಸಿದರೆ ಕನಕಪುರದಿಂದ ಸ್ಪರ್ಧಿಸಲು ಸಿದ್ಧ ಎಂದರು.

Related Video