News Hour: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಯತ್ನಾಳ್, ವಿಜಯೇಂದ್ರ ಬಣಕ್ಕೆ ನೋಟಿಸ್!
ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೇರಿದ್ದು, ಯತ್ನಾಳ್ ಹಾಗೂ ವಿಜಯೇಂದ್ರ ಬಣಕ್ಕೆ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಹೈಕಮಾಂಡ್ 72 ಗಂಟೆಗಳಲ್ಲಿ ಉತ್ತರಿಸಲು ಸೂಚಿಸಿದೆ. ಕಾಂಗ್ರೆಸ್ ಪರ ಮಾತನಾಡಿದ ಶಾಸಕರಿಗೂ ನೋಟಿಸ್ ಜಾರಿ ಮಾಡಲಾಗಿದೆ.
ಬೆಂಗಳೂರು (ಮಾ.25): ರಾಜ್ಯ ಬಿಜೆಪಿಯಲ್ಲಿ ಯತ್ನಾಳ್ ಬಣ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣಕ್ಕೆ ಶಿಸ್ತು ಸಮಿತಿ ನೋಟಿಸ್ ನೀಡಿದೆ. 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿದೆ.
ಯತ್ನಾಳ್ ಬಣ ಹಾಗೂ ವಿಜಯೇಂದ್ರ ಬಣದ ನಾಯಕರಿಗೆ ನೋಟಿಸ್ ಜಾರಿಯಾಗಿದೆ. ಅದರೊಂದಿಗೆ ಕಾಂಗ್ರೆಸ್ ಪರ ಮಾತನಾಡುವ ಇಬ್ಬರು ಶಾಸಕರಿಗೂ ನೊಟೀಸ್ ಜಾರಿ ಮಾಡಲಾಗಿದೆ.
ನಿಮ್ಮದು ನಾಲಿಗೆನೋ ಎಕ್ಕಡನೋ: ಶಾಸಕ ಯತ್ನಾಳ್‌ಗೆ ರೇಣುಕಾಚಾರ್ಯ ಪ್ರಶ್ನೆ
ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶಾಸಕ ಬಿಪಿ ಹರೀಶ್, ಶಿವರಾಮ್ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಸೇರಿದಂತೆ 6 ಮಂದಿಗೆ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.