BJPಯಲ್ಲಿ ಕಚ್ಚಾಟ ಸ್ಫೋಟ; BSY ಆಪ್ತನಿಗೆ ಕಪಾಳಮೋಕ್ಷ!

ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಸಂಘಟನೆಯಲ್ಲಿ ಬದಲಾವಣೆ ನಡೆದ ಬೆನ್ನಲ್ಲೇ, ಬಿಜೆಪಿ ಕಚೇರಿಯಲ್ಲಿ ಬಿ.ಎಸ್. ಯಡಿಯೂರಪ್ಪ ಬೆಂಬಲಿಗನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಸಿಎಂ ಬಿಎಸ್​ವೈ ಮೇಲಿನ ಸಿಟ್ಟಿನಿಂದಾಗಿಯೇ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರನ್ನು ಕೆಲಸದಿಂದ ವಜಾ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
 

Share this Video
  • FB
  • Linkdin
  • Whatsapp

ಬೆಂಗಳೂರು (ಅ.14): ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಸಂಘಟನೆಯಲ್ಲಿ ಬದಲಾವಣೆಗಳು ನಡೆದ ಬೆನ್ನಲ್ಲೇ, ಬಿಜೆಪಿ ಕಚೇರಿಯಲ್ಲಿ ಬಿ.ಎಸ್.ಯಡಿಯೂರಪ್ಪ ಬೆಂಬಲಿಗನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ.

ಕಪಾಳಮೋಕ್ಷ ಮಾಡಿ ಆತನನ್ನು ಹೊರದಬ್ಬಲಾಗಿದೆ ಎಂಬ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ವಾರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ಮಾಡುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೆಂಬಲಿಗ ಕಾರ್ಯಕರ್ತರು ಹಾಗೂ ಮುರಳೀಧರ್ ರಾವ್ ಅವರ ಸಿಬ್ಬಂದಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಕಿತ್ತಾಟ ಶುರುವಾಗಿದ್ದು, ಅದು ತಾರಕಕ್ಕೇರಿದೆ.

ಸಿಎಂ ಬಿಎಸ್​ವೈ ಮೇಲಿನ ಸಿಟ್ಟಿನಿಂದಾಗಿಯೇ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರನ್ನು ಕೆಲಸದಿಂದ ವಜಾ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.

Related Video