ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆನಾ?
ಜನಪ್ರತಿನಿಧಿ ಕಾಯ್ದೆ 1951ರ ಪ್ರಕಾರ ರಾಹುಲ್ ಗಾಂಧಿ ಅವರನ್ನು ವಯನಾಡು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ ಎಂದು ಲೋಕಸಭಾ ಕಾರ್ಯಾಲಯದಿಂದ ಅಧಿಕೃತ ಆದೇಶ ನೀಡಲಾಗದೆ.
ಬೆಂಗಳೂರು(ಮಾ.24): ಮೋದಿ ಸರ್‌ನೇಮ್ ಕುರಿತಾಗಿ ಹೇಳಿಕೆ ನೀಡುವ ವೇಳೆ ಒಬಿಸಿ ಜಾತಿಗಳ ನಿಂದನೆ ಮಾಡಿದ್ದ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲಿಯೇ ರಾಹುಲ್ ಗಾಂಧಿ ಅವರ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಸೂರತ್ ಕೋರ್ಟ್ ಶಿಕ್ಷೆ ನೀಡಿದ ಬೆನ್ನಲ್ಲಿಯೇ ರಾಹುಲ್ ಘಾಂಧಿ ಜಾಮೀನು ಪಡೆದು ದೆಹಲಿಗೆ ವಾಪಸಾಗಿದ್ದರು. ಆದರೆ, ಜನಪ್ರತಿನಿಧಿ ಕಾಯ್ದೆ 1951ರ ಪ್ರಕಾರ ರಾಹುಲ್ ಗಾಂಧಿ ಅವರನ್ನು ವಯನಾಡು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ ಎಂದು ಲೋಕಸಭಾ ಕಾರ್ಯಾಲಯದಿಂದ ಅಧಿಕೃತ ಆದೇಶ ನೀಡಲಾಗದೆ.
Rahul Gandhi Disqualified: ಪ್ರಜಾಪ್ರಭುತ್ವಕ್ಕೆ ಕಳಂಕ, ಸತ್ಯವನ್ನು ದಮನಿಸುವ ಯತ್ನ!
ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹಗೊಂಡಿದ್ದು ಕಾಂಗ್ರೆಸ್‌ಗೆ ಹಿನ್ನಡೆಯಾಗುತ್ತಾ?. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ನ ರಾಜಕೀಯ ವಿಶ್ಲೇಷಕ ಪ್ರಶಾಂತ್ ನಾತು ಅವರು ವಿವರವಾಗಿ ಮಾತನಾಡಿದ್ದಾರೆ.