ಪುತ್ತೂರಿನ ಕೈ ಅಭ್ಯರ್ಥಿ ಸಹೋದರನ ಮನೆ ಮೇಲೆ ಐಟಿ ರೈಡ್‌: ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ ರೂ. ವಶ

ಐಟಿ ಅಧಿಕಾರಿಗಳು ಪುತ್ತೂರಿನ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ ಸಹೋದರ ಕೆ.ಸುಬ್ರಹ್ಮಣ್ಯ ರೈ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಾಗೆ ಮನೆಯ ಅಂಗಳದಲ್ಲಿ ಸಣ್ಣ ಮರದಲ್ಲಿದ್ದ ಕೋಟಿ, ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು: ಪುತ್ತೂರು ಕಾಂಗ್ರೆಸ್‌ ಅಭ್ಯರ್ಥಿಗೆ ಆದಾಯ ತೆರಿಗೆ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಅಶೋಕ್‌ ರೈ ಸಹೋದರ ಸುಬ್ರಮಣ್ಯ ರೈ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿರುವ ಸುಬ್ರಮಣ್ಯ ರೈ ಮನೆಯಂಗಳದ ಗಿಡದಲ್ಲಿ ಕೋಟಿ ರೂಪಾಯಿ ನೇತಾಡುತ್ತಿದ್ದು, ಇದನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಹೈವೋಲ್ಟೇಜ್‌ ಕ್ಷೇತ್ರವಾಗಿದೆ. ಬಿಜೆಪಿ ಹಾಗೂ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ನಡುವೆ ಜಟಾಪಟಿಯಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೂಡ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ಬಾರಿ ಹೊಸ ಮುಖ ಅಶೋಕ್ ಕುಮಾರ್ ರೈಗೆ ಟಿಕೆಟ್ ನೀಡಿದೆ. 

Related Video