News Hour: ಎಲ್ಲವೂ ಊಹಾಪೋಹ, ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಇಲ್ಲ: ಎಚ್‌ಡಿಕೆ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ. ಇದೆಲ್ಲವೂ ಊಹಾಪೋಹ ಹಾಗೂ ರಾಜಕೀಯದಲ್ಲಿ ಇವೆಲ್ಲವೂ ಸಾಮಾನ್ಯ ಎಂದು ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
 

First Published Jun 12, 2023, 11:11 PM IST | Last Updated Jun 12, 2023, 11:11 PM IST

ಬೆಂಗಳೂರು (ಜೂ. 12): ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಯಲ್ಲಿ ಯಾವುದೇ ರೀತಿಯ ಮೈತ್ರಿ ಇಲ್ಲ.  ರಾಜಕಾರಣದಲ್ಲಿ ಇಂತಹ ಊಹಾಪೋಹ ಮಾಮೂಲಿ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇದೆಲ್ಲಾ ಗಾಳಿ ಸುದ್ದಿ, ಆ ರೀತಿ ಯಾವುದೇ ಚರ್ಚೆ ಆಗ್ತಿಲ್ಲ. ಈ ವಿಚಾರ ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭೆಗಾಗಿ ನಾನು ಜಿಲ್ಲಾವಾರು ಸಭೆ ಮಾಡಿದ್ದೇನೆ. ಗೆದ್ದವರು, ಸೋತವರ ಜತೆ ಈಗಾಗಲೇ ಮಾತಾಡಿದ್ದೇನೆ. ಯಾವ ರೀತಿಯಲ್ಲಿ ನಾವು ಚುನಾವಣೆ ಎದುರಿಸಬೇಕು? ಚುನಾವಣೆ ಗೆಲುವಿಗಾಗಿ ರೂಪುರೇಷೆ ಸಿದ್ಧ ಮಾಡ್ತಿದ್ದೇವೆ ಎಂದು ಚೆನ್ನಪಟ್ಟಣದಲ್ಲಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌- ಬಿಜೆಪಿ ಮೈತ್ರಿ ವಿಚಾರ: ಈ ಬಗ್ಗೆ ಹೆಚ್‌ಡಿಕೆ ಹೇಳಿದ್ದೇನು?

ಇದೇ ವೇಳೆ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಗೊಂದಲಕ್ಕೂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ.  ನಂದುಬಿಡಿ ಹಾಲಿ ಸಂಸದರ ಕಥೆಯೇ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ ಎಂದು ಹೇಳುವ ಮೂಲಕ  ಸಂಸದ ಡಿ.ಕೆ.ಸುರೇಶ್ ಹೆಸರೇಳದೇ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.