Asianet Suvarna News Asianet Suvarna News

ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ, ಬಿ.ಎಲ್‌ ಸಂತೋಷ್ ವಿರುದ್ಧ ಮತ್ತೆ ಶೆಟ್ಟರ್ ವಾಗ್ದಾಳಿ!

ಲಿಂಗಾಯತ ಲೀಡರ್‌ಶಿಪ್ ಇಲ್ಲದೆ ಸರ್ಕಾರ ಮಾಡ್ತೇವೆ ಅಂತಾ ಹೊರಟಿದ್ದಾರೆ. ಬಿ.ಎಲ್. ಸಂತೋಷ್ ಅವರೇ ತೇಜಸ್ವಿನಿ ಅನಂತಕುಮಾರ್‌ಗೆ ಟಿಕೆಟ್ ಕೈತಪ್ಪಿಸಿದ್ದು ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೊಮ್ಮೆ ಬಿ.ಎಲ್ ಸಂತೋಷ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲಿಂಗಾಯತ ಲೀಡರ್‌ಶಿಪ್ ಇಲ್ಲದೆ ಸರ್ಕಾರ ಮಾಡ್ತೇವೆ ಅಂತಾ ಹೊರಟಿದ್ದಾರೆ. ಬಿ.ಎಲ್. ಸಂತೋಷ್ ಅವರೇ ತೇಜಸ್ವಿನಿ ಅನಂತಕುಮಾರ್‌ಗೆ ಟಿಕೆಟ್ ಕೈತಪ್ಪಿಸಿದ್ದು, ಇನ್ನೊಬ್ಬರ ಹೆಗಲ ಮೇಲೆ ಬಂದೂಕು ಇಟ್ಟು ಹೊಡೆಯುವುದು ಬಿಡಲಿ. ನೇರವಾಗಿ ನನ್ನ ಜೊತೆ ಯುದ್ಧಕ್ಕೆ ಬರಲಿ. ಬಿ.ಎಲ್. ಸಂತೋಷ್‌ಗೆ ಡೈರೆಕ್ಟ್ ಫೈಟ್ ಮಾಡುವ ಸ್ವಭಾವವಿಲ್ಲ. ಹಿಂಬಾಗಿಲ ರಾಜಕೀಯ ಮಾಡುವುದೇ ಇವರ ಸ್ವಭಾವ. ಬಿ.ಎಲ್. ಸಂತೋಷ್ ಬಗ್ಗೆ ರಾಷ್ಟ್ರದಲ್ಲಿ ಮೊದಲು ಧ್ವನಿ ಎತ್ತಿದವನೇ ನಾನು, ಬಹಳಷ್ಟು ಜನ ಫೋನ್ ಮಾಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ತೇಜಸ್ವಿನಿ ಅನಂತಕುಮಾರ್‌ಗೆ ಟಿಕೆಟ್ ಕೈ ತಪ್ಪಿಸಿದ್ದೇ ಬಿ.ಎಲ್‌ ಸಂತೋಷ್, ಶೆಟ್ಟರ್ ಗಂಭೀರ

ಯಾವುದೇ ಲಾಬಿ ಮಾಡಿ, ಕೈಕಾಲು ಹಿಡಿದು ರಾಜಕೀಯ ಮಾಡಿದವನು ನಾನಲ್ಲ. ಹೀಗಾಗಿ ಅವರಿಗೆ ತಳಮಳ ಶುರುವಾಗಿದೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಮಾಡಿದ್ರು. ಪ್ರತಿದಿನ ಒಬ್ಬರು ಬಂದು ಪ್ರಚಾರ ಮಾಡಿ, ಸುತ್ತಾಡಿ ಹೋಗ್ತಿದ್ದಾರೆ. ಬೇರೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಚಿಂತೆಯಿಲ್ಲ, ಕೇವಲ ಶೆಟ್ಟರ್ ಒಬ್ಬರನ್ನು ಸೋಲಿಸಲು ಪ್ರಯತ್ನ ನಡೆಸುತ್ತಿದ್ದಾರೆ.