ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕ: ಲಿಂಗಾಯತ ಮತಗಳನ್ನು ತರಲು 'ಕೈ' ಶೆಟ್ಟರ್‌ ಮೊರೆ

ಜಗದೀಶ್‌ ಶೆಟ್ಟರ್‌ ಈಗ ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕ
ಲಿಂಗಾಯತ ಮತಗಳು ಹೆಚ್ಚಿರುವ ಕ್ಷೇತ್ರಗಳಲ್ಲಿ ಕ್ಯಾಂಪೇನ್‌
ಕಾಂಗ್ರೆಸ್‌ಗೆ ಲಿಂಗಾಯತ ಮತಗಳನ್ನು ತರಲು ಶೆಟ್ಟರ್ ಮೊರೆ

Share this Video
  • FB
  • Linkdin
  • Whatsapp

ಕಾಂಗ್ರೆಸ್‌ಗೆ ಮತ್ತೊಬ್ಬ ಸ್ಟಾರ್‌ ಪ್ರಚಾರಕರು ಸಿಕ್ಕಿದ್ದಾರೆ. ಇದು ಬಿಜೆಪಿಗೆ ಬಿಸಿ ತುಪ್ಪವಾಗಿದೆ. ಹೌದು, ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಜಗದೀಶ್‌ ಶೆಟ್ಟರ್‌ ಈಗ ಕಾಂಗ್ರೆಸ್‌ನ ಸ್ಟಾರ್‌ ಕ್ಯಾಂಪೇನರ್‌ ಆಗಿದ್ದಾರೆ. ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಶೆಟ್ಟರ್‌ ಜೊತೆ ಪ್ರಚಾರ ಮಾಡುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಿದೆ ಎನ್ನಲಾಗ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಜಗದೀಶ್‌ ಶೆಟ್ಟರ್‌ ಪ್ರಚಾರ ಮಾಡುವಂತೆ ಸೂಚಿಸಿದ್ದು, ಮೂರು ದಿನ ಪ್ರವಾಸ ಮಾಡಲಿದ್ದಾರೆ. ಈ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಕಾಂಗ್ರೆಸ್ ಶೆಟ್ಟರ್‌ ಮೊರೆ ಹೋಗಿದೆ. ಜಗದೀಶ್‌ ಶೆಟ್ಟರ್‌ ಮೊದಲು ಬಿಜೆಪಿಯಲ್ಲಿದ್ದು, ಟಿಕೆಟ್‌ ಸಿಗದ ಹಿನ್ನೆಲೆ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು.

ಇದನ್ನೂ ವೀಕ್ಷಿಸಿ: Party Rounds: ಟೀಕಿಸುವ ಭರದಲ್ಲಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ! ಬಳಿಕ ಯೂಟರ್ನ್!

Related Video