ಶೆಟ್ಟರ್ ಆಗಮನದಿಂದ ಕಾಂಗ್ರೆಸ್‌ಗೆ ಆನೆ ಬಲ: ಸಿದ್ದರಾಮಯ್ಯ

ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ  ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜಗದೀಶ್ ಶೆಟ್ಟರ್ ಆಗಮನದಿಂದ ಕಾಂಗ್ರೆಸ್‌ಗೆ ದೊಡ್ಡ ಬಲ ಬಂದಿದೆ ಎಂದು ಹೇಳಿದರು.

First Published Apr 17, 2023, 11:09 AM IST | Last Updated Apr 17, 2023, 11:09 AM IST

ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ  ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜಗದೀಶ್ ಶೆಟ್ಟರ್ ಆಗಮನದಿಂದ ಕಾಂಗ್ರೆಸ್‌ಗೆ ದೊಡ್ಡ ಬಲ ಬಂದಿದೆ.ಅವರು ರಾಜ್ಯ ಕಂಡ ಸಜ್ಜನ ರಾಜಕಾರಣಿಯಾಗಿದ್ದಾರೆ. ಬಹಳ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಜಾತ್ಯಾತೀತವಾಗಿ ಕೆಲಸ ಮಾಡಿದ್ದಾರೆ ಅವರನ್ನು ಹತ್ತಿರದಿಂದ ನೋಡಿದ್ದೇನೆ. ಶೆಟ್ಟರ್‌  ಮುಖ್ಯಮಂತ್ರಿ ಆಗಿದ್ದಾಗ, ನಾನು ವಿಪಕ್ಷ ನಾಯಕನಾಗಿದ್ದೆ. ಬಿಜೆಪಿಯಲ್ಲಿ ಸ್ವಾರ್ಥಕ್ಕಾಗಿ ಜಗದೀಶ್‌ ಶೆಟ್ಟರ್​​ರನ್ನು ಬಲಿಕೊಡುವ ಕೆಲಸ ಮಾಡಲಾಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ನಾಯಕರಾದ ಜಗದೀಶ್‌ ಶೆಟ್ಟರ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕಾರ್ಯಕ್ರಮದಲ್ಲಿ ಹೇಳಿದರು.

Video Top Stories