
ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ ರಾಜಕಾರಣ ಬಿಡಲಿ: ಜಗದೀಶ್ ಶೆಟ್ಟರ್ ಪ್ರಶ್ನೆ
ನಾನು ಸಚಿವ ಆಗಬೇಕೆಂದು ಕಾಂಗ್ರೆಸ್ ಸೇರಿಲ್ಲ. ಬಿಜೆಪಿಯವರು ಮೋಸ ಮಾಡಿದ್ದಕ್ಕೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿ: ನಾನು ಏನೋ ಆಗಬೇಕು ಅಂತಾ ಆಸೆಯಿಂದ ಕಾಂಗ್ರೆಸ್ ಸೇರಿಲ್ಲ. ಬಿಜೆಪಿಯವರು ಮಾಡಿದ ಮೋಸಕ್ಕಾಗಿ ಕಾಂಗ್ರೆಸ್ ಸೇರಿದ್ದೇನೆ. ಶಾಸಕನಾದ್ರೆ ಮನಸ್ಸಿಗೆ ಸಮಾಧಾನ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ. ಹೀಗಿದ್ದಾಗ ಅವರು ರಾಜಕಾರಣ ಬಿಡಿ ಎಂದ್ರೆ, ಬಿಡ್ತಾರಾ?. ಮೋದಿಯವರು ನಾಲ್ಕು ಬಾರಿ ಮುಖ್ಯಮಂತ್ರಿ, ಪ್ರಧಾನಿ ಆದ್ರು. ಅವರು ರಾಜಕೀಯ ಬಿಡ್ತಾರಾ? ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಲ್ಹಾದ್ ಜೋಶಿ ಸುಳ್ಳು ಹೇಳೋದು ಕಲ್ತಿದ್ದಾರೆ. ಬಿಜೆಪಿ ಟಿಕೆಟ್ ಕೊಟ್ಟು ಶಾಸಕ ಮಾಡಿದ್ರೆ ಎಲ್ಲಾ ಸರಿಯಿರುತ್ತಿತ್ತು.ನನಗೆ ಟಿಕೆಟ್ ತಪ್ಪಿದ್ದರಿಂದ 15-20 ಕ್ಷೇತ್ರಗಳಲ್ಲಿ ಎಫೆಕ್ಟ್ ಆಗಿದೆ.ಈ ಎಲ್ಲಾ ಕಾರಣಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ಸಿದ್ದು, ಡಿಕೆಶಿ ಕೈ ಸೇರಿದ ಬೂತ್ ಕಮಿಟಿ ವರದಿ: ರಿಪೋರ್ಟ್ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆ !