Assembly election: ಕಾಂಗ್ರೆಸ್ ಬಿಟ್ಟು ಬಿಆರ್‌ಎಸ್‌ನತ್ತ ಜಮೀರ್? ಕೈ ಹೈಕಮಾಂಡ್ ಬುಲಾವ್
ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಂಗ್ರೆಸ್ ತೊರೆಯುತ್ತಾರೆ ಎಂಬ ಆತಂಕದಿಂದ ಕೈ ಹೈಕಮಾಂಡ್ ಜಮೀರ್‌ನನ್ನು ದೆಹಲಿಗೆ ಕರೆಸಿಕೊಂಡಿದೆ. ದೆಹಲಿಯಲ್ಲಿ ಇಂದು ಕಾಂಗ್ರೆಸ್ ಮುಖಂಡ ಸುರ್ಜೇವಾಲಾ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರು (ಡಿ.28): ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿದ್ದಾರೆ. ಸುರ್ಜೇವಾಲಾ ಅವರನ್ನು ಭೇಟಿಯಾಗಿದ್ದಾರೆ. ಇನ್ನು ಕಾಂಗ್ರೆಸ್ ತೊರೆಯುವ ಬಗ್ಗೆ ಜಮೀರ್ ಅಹಮದ್ ಚಿಂತನೆಯಲ್ಲಿದ್ದರು ಎಂದು ತಿಳಿದುಬಂದಿತ್ತು. ಈ ಸುಳಿವಿನ ಬೆನ್ನಲ್ಲೇ ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎಂದು ಕೇಳಿಬಂದಿದೆ.
ಇತ್ತೀಚೆಗೆ ಜಮೀರ್ ಅಹಮದ್ ಅವರು ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಜಮೀರ್ ಭಾರತ್ ರಾಷ್ಟ್ರೀಯ ಸಮಿತಿ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿದ್ದವು. ಕಾಂಗ್ರೆಸ್ ತೊರೆಯುವ ಚಿಂತನೆ ಮಾಡುತ್ತಿದ್ದಾರೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ದೆಹಲಿಗೆ ಕರೆಸಿಕೊಂಡು ಅಸಮಾಧಾನ ಶಮನ ಮಾಡಲು ಮುಂದಾಗಿದೆ.