Belagavi: ಹೆಬ್ಬಾಳ್ಕರ್‌ ಕ್ಷೇತ್ರದಲ್ಲಿ ಸಹೋದರರ ಸವಾಲ್! ರಮೇಶ್‌ Vs ಸತೀಶ್!

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜಾರಕಿಹೊಳಿ ಸಹೋದರರ ಸವಾಲ್‌ ಆರಂಭವಾಗಿದೆ. ರಮೇಶ್‌ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಪರ ಹಾಗೂ ಸತೀಶ್‌ ಜಾರಕಿಹೊಳಿ ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಳಗಾವಿ (ಫೆ.08): ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ರಂಗೇರಿದೆ. ಹೆಬ್ಬಾಳ್ಕರ್‌ ಅವರನ್ನು ಸೋಲಿಸಲು ರಮೇಶ್‌ ಜಾರಕಿಹೊಳಿ ಶಪಥ ಮಾಡಿ ಅಲ್ಲಿ ಚುನಾವಣೆ ಅಖಾಡಕ್ಕೆ ಮುಂದಾಗಿದ್ದಾರೆ.

ಆದರೆ, ಮತ್ತೊಂದೆಡೆ ಶಾಸಕ ಸತೀಶ್‌ ಜಾರಕಿಹೊಳಿ ಅವರು ಪಿಎಲ್‌ಡಿ ಬ್ಯಾಂಕ್‌ ವಿಚಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ನಡುವೆ ಉಂಟಾಗಿದ್ದ ವೈಮನಸ್ಸನ್ನು ಮರೆತು ಕಾಂಗ್ರೆಸ್‌ನ ಪರವಾಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಹೀಗಾಗಿ, ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಜಾರಕಿಹೊಳಿ ಸಹೋದರರ ಸವಾಲ್‌ ಆರಂಭವಾಗಿದೆ. ರಮೇಶ್‌ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಾಗೂ ಸತೀಶ್‌ ಜಾರಕಿಹೊಳಿ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್‌ ಪರವಾಗಿ ಚುನಾವಣಾ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಇನ್ನು ಕಾಂಗ್ರೆಸ್‌ ಶಾಸಕ ಸತೀಶ್‌ ಜಾರಕಿಹೊಳಿ ಅವರು ಕ್ಷೇತ್ರದ ತಾರಿಹಾಳದಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ) ಸಮಾವೇಶ ಮಾಡಲು ಮುಂದಾಗಿದ್ದಾರೆ.

Related Video