Asianet Suvarna News Asianet Suvarna News

ತೀವ್ರ ಕುತೂಹಲ ಮೂಡಿಸಿದ ಜಾರಕಿಹೊಳಿ ಬ್ರದರ್ಸ್-ಯಡಿಯೂರಪ್ಪ ಭೇಟಿ

3 ದಿನಗಳ ಹಿಂದೆ ಬಿಜೆಪಿ ವರಿಷ್ಠರನ್ನು ಭೇಟಿಯಾಗಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಎಂ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ.

ಬೆಂಗಳೂರು, (ಫೆ.15):: ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ  ಜಾರಕಿಹೊಳಿ ಸಹೋದರರು ದಿಢೀರ್ ಭೇಟಿ ನೀಡಿದ್ದಾರೆ.

ವರಿಷ್ಠರ ನೇರ ಸಂಪರ್ಕಕ್ಕೆ ಜಾರಕಿಹೊಳಿ ಕಸರತ್ತು!

ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಇಂದು ((ಶನಿವಾರ) ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

3 ದಿನಗಳ ಹಿಂದೆ ಬಿಜೆಪಿ ವರಿಷ್ಠರನ್ನು ಭೇಟಿಯಾಗಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಎಂ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ.