ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ?: ದೆಹಲಿ ಸಭೆ ನಂತರ ಅಂತಿಮ ಮುದ್ರೆ..?
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದ ಹಾಗೆ ರಾಜ್ಯದಲ್ಲಿ ಹಲವಾರು ಬದಲಾವಣೆಗಳು ಆಗುತ್ತಿವೆ. ಜುಲೈ 18 ರ ನಂತರ ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಎರಡನೇ ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆ ಇದೆ.
ಲೋಕಸಭಾ ಚುನಾವಣೆಗೆ ಬಿಜೆಪಿ(BJP) ಮತ್ತು ಜೆಡಿಎಸ್(JDS) ನಡುವೆ ಮೈತ್ರಿಯಾಗುತ್ತೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಈಗಾಗಲೇ ಮಾತುಕತೆ ನಡೆದಿದೆ ಎನ್ನಲಾಗ್ತಿದೆ. ಅಲ್ಲದೇ ಜುಲೈ 18ರ ನಂತರ ದೆಹಲಿಯಲ್ಲಿ ಎರಡನೇ ಸುತ್ತಿನ ಮಾತುಕತೆ ನಡೆಯಲಿದ್ದು, ಆ ಬಳಿಕ ಮೈತ್ರಿ ಫೈನಲ್ ಆಗಲಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್(Congress) ಈ ಬಾರಿ ಲೋಕಸಭಾ ಚುನಾವಣೆಯಲ್ಲಿ(Loksabha election) 20ಕ್ಕಿಂತ ಹೆಚ್ಚು ಸೀಟ್ ಗೆಲ್ಲಲೇ ಬೇಕು ಎಂಬ ಗುರಿಯನ್ನು ಹೊಂದಿದೆ. ಹಾಗಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅನಿವಾರ್ಯ ಎನ್ನಲಾಗ್ತಿದೆ. ಆದ್ರೆ ಜೆಡಿಎಸ್ ಬಿಜೆಪಿ ಮೈತ್ರಿ ಒಪ್ಪಿಕೊಳ್ಳುತ್ತಾ ಎಂಬುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ದೆಹಲಿಯಲ್ಲಿ ನಡೆಯುವ ಎನ್‌ಡಿಎ ಮಿತ್ರ ಪಕ್ಷಗಳ ಸಭೆಗೆ ಜೆಡಿಎಸ್ ಭಾಗಿಯಾಗುತ್ತಾ ಎಂದು ನೋಡಬೇಕಿದೆ.
ಇದನ್ನೂ ವೀಕ್ಷಿಸಿ: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಕಳ್ಳರ ಹಾವಳಿ: ಎಟಿಎಂನಲ್ಲಿದ್ದ 24 ಲಕ್ಷ ಕದ್ದ ಖದೀಮರು