Asianet Suvarna News Asianet Suvarna News

ಮತ್ತೊಮ್ಮೆ ಲಾಕ್‌ಡೌನ್‌ಗೆ ಧ್ವನಿಗೂಡಿಸಿದ ಮಾಜಿ MLC ಶರವಣ: ಸಿಎಂಗೆ ವಿಶೇಷ ಮನವಿ

ಮತ್ತೆ ಲಾಕ್‌ಡೌನ್ ಮಾಡಬೇಕೆಂಬ ಕೂಗು ಕೇಳಿಬರುತ್ತಿದೆ. ಇದಕ್ಕೆ ಮಾಜಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ. ಎ. ಶರವಣ ಅವರು ಧ್ವನಿಗೂಡಿಸಿದ್ದು, ವಿಡಿಯೋ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ. 

ಬೆಂಗಳೂರು, (ಜುಲೈ.05): ಕೊರೋನಾ ವೈರಸ್ ಎಂಬ ಹೆಸರು ಕೇಳಿದರೆ ಸಾಕು ಕನ್ನಡಿಗರು ನಿದ್ದೆಯಲ್ಲೂ ಬೆಚ್ಚಿ ಬೀಳುವಂತಾ ವಾತಾವರಣ ಸೃಷ್ಟಿಯಾಗುತ್ತಿದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್‌ಡೌನ್ ಮಾಡಬೇಕೆಂಬ ಕೂಗು ಕೇಳಿಬರುತ್ತಿದೆ. ಇದಕ್ಕೆ ಮಾಜಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ. ಎ. ಶರವಣ ಅವರು ಧ್ವನಿಗೂಡಿಸಿದ್ದು, ವಿಡಿಯೋ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪಗೆ ವಿಶೇಷ ಮನವಿ ಮಾಡಿದ್ದಾರೆ.