ಒಂದೇ ಪಕ್ಷದಲ್ಲಿದ್ದೀರಿ... ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅನರ್ಹತೆ ಬಗ್ಗೆ ಎ.ಮಂಜು ಮಾತು!

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕರ್ನಾಟಕ ಹೈಕೋರ್ಟ್ ಅನರ್ಹಗೊಳಿಸಿರುವ ವಿಚಾರವಾಗಿ ಜೆಡಿಎಸ್ ಶಾಸಕ, ದೂರುದಾರರೂ ಆಗಿರುವ ಎ.ಮಂಜು ಪ್ರತಿಕ್ರಿಯಿಸಿದ್ದು, ನಮ್ಮ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಹೇಳಿದ್ದಾರೆ. 
 

First Published Sep 1, 2023, 9:03 PM IST | Last Updated Sep 1, 2023, 9:03 PM IST

ಬೆಂಗಳೂರು (ಸೆ.01): ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕರ್ನಾಟಕ ಹೈಕೋರ್ಟ್ ಅನರ್ಹಗೊಳಿಸಿರುವ ವಿಚಾರವಾಗಿ ಜೆಡಿಎಸ್ ಶಾಸಕ, ದೂರುದಾರರೂ ಆಗಿರುವ ಎ.ಮಂಜು ಪ್ರತಿಕ್ರಿಯಿಸಿದ್ದು, ನಮ್ಮ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಹೇಳಿದ್ದಾರೆ. ಹೈಕೋರ್ಟ್​ ತೀರ್ಪನ್ನು ಸ್ವಾಗತಿಸುವೆ, ಖುಷಿ ಸಿಕ್ಕಿದೆ. ಸುಳ್ಳು ಮಾಹಿತಿ ನೀಡಿದ್ದರಿಂದ ಹೈಕೋರ್ಟ್ ಅವರನ್ನು ಅನರ್ಹಗೊಳಿಸಿದೆ ಎಂದು ಮಂಜು ತಿಳಿಸಿದ್ದಾರೆ. ಅವರು ಸರಿಯಿದ್ದೇವೆ ಅನ್ನುವುದಾದರೆ ಕಾನೂನು ಹೋರಾಟ ಮಾಡಲಿ. ಸುಪ್ರೀಂ ಕೋರ್ಟ್​ನಲ್ಲಿ ಕಾನೂನು ಹೋರಾಟಮಾಡಿ ಸಮರ್ಥಿಸಿಕೊಳ್ಳಲಿ. ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದರೆ ಶಿಕ್ಷೆ ಅನುಭವಿಸಲಿ. ಯಾರೇ ಆದರೂ ಸರಿ, ಚುನಾವಣಾ ಆಯೋಗಕ್ಕೆ ಸರಿಯಾದ ಮಾಹಿತಿ ನೀಡಬೇಕು. ಬದಲಾದ ಸನ್ನಿವೇಶದಲ್ಲಿ ನಾನು ಜೆಡಿಎಸ್​ ಶಾಸಕನಾಗಿದ್ದೇನೆ. ಹಾಗೆಂದು ಜೆಡಿಎಸ್ ಸೇರುವಾಗ ಯಾವುದೇ ಷರತ್ತು ವಿಧಿಸಿರಲಿಲ್ಲ. ಪ್ರಜ್ವಲ್ ವಿರುದ್ಧ ಕೇಸ್ ದಾಖಲಿಸಿದ್ದ ವಿಚಾರವಾಗಿ ಅಂದೇ ಮಾಹಿತಿ ನೀಡಿದ್ದೆ. ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಮಾತುಕತೆ ವೇಳೆಯೂ ಹೇಳಿದ್ದೆ ಎಂದರು.