ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್‌ಗೆ ಶಾಕ್! ದಳಪತಿಗಳ ಆಪ್ತ ಕಾಂಗ್ರೆಸ್‌ಗೆ ಸೇರ್ಪಡೆ!
ವಿಧಾನಸಭಾ ಚುನಾವಣೆಗೆ ದಿನಗಣನೆಯ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಜೋರಾಗುತ್ತಿದೆ. ಬಹಳಷ್ಟು ನಾಯಕರು ಜೆಡಿಸ್ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದಾರೆ.
ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಬಿಗ್ ಶಾಕ್ ಎದುರಾಗಿದ್ದು , ಬಹಳಷ್ಟು ನಾಯಕರು ಜೆಡಿಸ್ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದಾರೆ.ಕೆ.ಆರ್. ಪೇಟೆ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ,ದೇವೇಗೌಡರ ಆಪ್ತ ದೇವರಾಜ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಿ ಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಯಾಗಿದ್ದಾರೆ. ಇದರಿಂದ ಮಂಡ್ಯ ಜಿಲ್ಲೆಯ ರಾಜಕೀಯ ಹೊಸ ತಿರುವು ಪಡೆಯುತ್ತಿದೆ ಎನ್ನುವುದು ತೋರುತ್ತದೆ.