Asianet Suvarna News Asianet Suvarna News

ರಾಜ್ಯದಲ್ಲಿ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯ: ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಶರವಣ

ರಾಜ್ಯದಲ್ಲಿ ಆರ್‌ಆರ್‌ ನಗರ, ಶಿರಾ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದಕ್ಕೆ ಜೆಡಿಎಸ್ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. 
 

ಬೆಂಗಳೂರು (ನ. 06): ರಾಜ್ಯದಲ್ಲಿ ಆರ್‌ಆರ್‌ ನಗರ, ಶಿರಾ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದಕ್ಕೆ ಜೆಡಿಎಸ್ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. 

'ವಿನಯ್ ಕುಲಕರ್ಣಿ ಬಂಧನ' ಗೃಹ ಸಚಿವ ಬೊಮ್ಮಾಯಿ ಹೇಳಿದ್ದಿಷ್ಟು!

'ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ಧನ್ಯವಾದಗಳು. ಈ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ ಹಗಲು ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳು. ವಿಶೇಷವಾಗಿ ರಾಜರಾಜೇಶ್ವರಿ ಕ್ಷೇತ್ರದ ಉಸ್ತುವಾರಿಯಾಗಿದ್ದ ನನಗೆ ಸಹಕಾರ ನೀಡಿದ ಎಲ್ಲರಿಗೂ ಕೋಟಿ ಕೋಟಿ ನಮನ' ಎಂದು ಟ್ವೀಟ್ ಮಾಡಿದ್ದಾರೆ.