ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಸೇರೋದು ಪಕ್ಕಾನಾ?

ಸಂಸದೆ ಸುಮಲತಾ ನಾಳೆಯೇ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಸಂಸದೆ ಒಳಗುಟ್ಟು ರಟ್ಟು ಮಾಡಿದ್ದಾರೆ. 
 

Share this Video
  • FB
  • Linkdin
  • Whatsapp

ಸಂಸದೆ ಸುಮಲತಾ ನಾಳೆಯೇ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆಗೆ ಆಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಸರ್ಕಾರಿ ಕಾರ್ಯಕ್ರಮವಾಗಿದ್ದರಿಂದ ನಾಳೆ ಸುಮಲತಾ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು, ಮಂಡ್ಯ ಸಂಸದೆ ಸುಮಲತಾ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿರುವುದು ಸುಮಲತಾ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.ನಾಳೆ ಮಧ್ಯಾಹ್ನ ಮಂಡ್ಯದ ತಮ್ಮ ನಿವಾಸದಲ್ಲಿ ಸುಮಲತಾ ಸುದ್ದಿಗೋಷ್ಠಿ ಕರೆದಿದ್ದು, ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಬಗ್ಗೆ ಘೋಷಿಸಲಿದ್ದಾರೆ ಎಂದು ಹೇಳಲಾಗಿದೆ. 

Related Video