ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ

ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯದಲ್ಲಿ ವಿವಿಧ ಬೆಳವಣಿಗೆಗಳಾಗುತ್ತಿದೆ.  ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗುತ್ತಿದೆ. ಹಾಲಿ ಎಂಎಲ್‌ಸಿ ಸಂದೇಶ್ ನಾಗರಾಜ್ ಜೆಡಿಎಸ್‌ಗೆ ಗುಡ್ ಬೈ ಹೇಳುತ್ತಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಸೇರಲು ಸಂದೇಶ್ ನಾಗರಾಜ್ ನಿರ್ಧಾರ ಮಾಡಿದ್ದಾರೆ. 

ಮೂರು ವರ್ಷಗಳಿಂದ ಮಾನಸಿಕವಾಗಿ ಬಿಜೆಪಿಯಲ್ಲಿ ಇದ್ದೇನೆ. ಜೆಡಿಎಸ್ ನಾಯಕರ ಜೊತೆಗೆ ಸಂಪರ್ಕದಲ್ಲಿಯೂ ಇಲ್ಲ ಎಂದಿದ್ದಾರೆ. ಅಲ್ಲದೇ  ಜೆಡಿಎಸ್ ಮುಖಂಡ ಕುಮಾರಸ್ವಾಮಿಗೆ ನನ್ನ ಅಗತ್ಯ ಇದ್ದಂತೆ ಇಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು ಎಂದು ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.  ಅಲ್ಲದೇ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.  

First Published Nov 12, 2021, 1:24 PM IST | Last Updated Nov 12, 2021, 2:05 PM IST

ಮೈಸೂರು (ನ.12):  ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ  ಘೋಷಣೆಯಾಗಿದೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯದಲ್ಲಿ ವಿವಿಧ ಬೆಳವಣಿಗೆಳು  ಆಗುತ್ತಿದೆ.  ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗುತ್ತಿದೆ. ಹಾಲಿ ಎಂಎಲ್‌ಸಿ ಸಂದೇಶ್ ನಾಗರಾಜ್ ಜೆಡಿಎಸ್‌ಗೆ ಗುಡ್ ಬೈ ಹೇಳುತ್ತಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಸೇರಲು ಸಂದೇಶ್ ನಾಗರಾಜ್ ನಿರ್ಧಾರ ಮಾಡಿದ್ದಾರೆ. 

Mysuru ಸಂದೇಶ್‌, ಧರ್ಮಸೇನಗೆ 3 ಬಾರಿ ಟಿಕೆಟ್‌ ಸಿಗುವುದೇ?

ಮೂರು ವರ್ಷಗಳಿಂದ ಮಾನಸಿಕವಾಗಿ ಬಿಜೆಪಿಯಲ್ಲಿ ಇದ್ದೇನೆ. ಜೆಡಿಎಸ್ ನಾಯಕರ ಜೊತೆಗೆ ಸಂಪರ್ಕದಲ್ಲಿಯೂ ಇಲ್ಲ ಎಂದಿದ್ದಾರೆ. ಅಲ್ಲದೇ  ಜೆಡಿಎಸ್ ಮುಖಂಡ ಕುಮಾರಸ್ವಾಮಿಗೆ ನನ್ನ ಅಗತ್ಯ ಇದ್ದಂತೆ ಇಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು ಎಂದು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.  ಇನ್ನು ನಾನು ಬಿಜೆಪಿಗೆ ಬೆಂಬಲ ನೀಡುತ್ತಾ ಬಂದಿದ್ದೇ, ಅಲ್ಲದೇ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವೂ ತಮಗೆ ಇದೆ ಎಂದು ಸಂದೇಶ್ ನಾಗರಾಜ್ ಹೇಳಿದ್ದಾರೆ.