
ಕಾಂಗ್ರೆಸ್‌ನವರು ಈಗಷ್ಟೇ ತಾಳಿ ಕಟ್ಟಿದ್ದಾರೆ, ಹನಿಮೂನ್ ಮುಗಿಸಲಿ: ಸಿ.ಎಂ.ಇಬ್ರಾಹಿಂ
ವಿಧಾನಸಭೆ ಚುನಾವಣಾ ಫಲಿತಾಂಶದ ಬಳಿಕ ಕಾಣೆಯಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ದಿಢೀರ್ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್, ಬಿಜೆಪಿ ಪಕ್ಷಗಳ ವಿರುದ್ಧ ಕೆಂಡಕಾರಿದ್ದಾರೆ.
ಬೆಂಗಳೂರು (ಜು.05): ವಿಧಾನಸಭೆ ಚುನಾವಣಾ ಫಲಿತಾಂಶದ ಬಳಿಕ ಕಾಣೆಯಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ದಿಢೀರ್ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್, ಬಿಜೆಪಿ ಪಕ್ಷಗಳ ವಿರುದ್ಧ ಕೆಂಡಕಾರಿದ್ದಾರೆ. ಈ ಬಗ್ಗೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಬಿಜೆಪಿ ಹಾಕಿಕೊಟ್ಟಿದ್ದ ಭ್ರಷ್ಟಾಚಾರ ಪದ್ದತಿಯನ್ನು ಕಾಂಗ್ರೆಸ್ ಮುಂದುವರಿಸಿದೆ. ಜೊತೆಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡದೆ ಇರುವುದಕ್ಕೆ ಕೂಡಾ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ನವರು ಈಗಷ್ಟೇ ತಾಳಿ ಕಟ್ಟಿದ್ದಾರೆ, ಹನಿಮೂನ್ ಮುಗಿಸಲಿ, ಆಮೇಲೆ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾತನಾಡುತ್ತೀನಿ ಎಂದು ಹೇಳಿದರು. ಈ ವೇಳೆ ಜೆಡಿಎಸ್ ಸೋಲಿನ ವಿಚಾರ, ಏಕರೂಪ ನಾಗರೀಕ ಸಂಹಿತೆ ಬಗ್ಗೆ ಪ್ರತಿಕ್ರಿಯಿಸಿದರು.