ರಾಜ್ಯಸಭೆ ಎಲೆಕ್ಷನ್‌ಗೆ 4ನೇ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್‌ ನಿರ್ಧಾರ, ಮೈತ್ರಿ ಅನಿವಾರ್ಯ!

ವಿಧಾನ ಪರಿತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮುಗಿದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆ ಕಾವು ರಂಗೇರುತ್ತಿದೆ. ನಾಲ್ಕನೇ ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಜೆಡಿಎಸ್ ಮಾಡಿದೆ. ಈ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದ್ರೆ ದಳಪತಿಗಳು ಯಾರ ಜತೆ ಮೈತ್ರಿ ಮಾಡಿಕೊಳ್ಳಬಹುದು?

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.24): ವಿಧಾನ ಪರಿತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮುಗಿದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆ ಕಾವು ರಂಗೇರುತ್ತಿದೆ.ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು, ಒಬ್ಬರಿಗೆ 45 ಶಾಸಕರ ಮತಗಳ ಅಗತ್ಯವಿದೆ. 

ನಿರ್ಮಲಾಗೆ ಕರ್ನಾಟಕದಿಂದ ರಾಜ್ಯಸಭೆ ಟಿಕೆಟ್‌ ಡೌಟ್‌!

122 ಶಾಸಕರನ್ನು ಹೊಂದಿರುವ ಬಿಜೆಪಿಯು ತನ್ನ ನಾಮನಿರ್ದೇಶಿತರಲ್ಲಿ ಇಬ್ಬರನ್ನು ಸುಲಭವಾಗಿ ಆಯ್ಕೆ ಮಾಡಬಹುದು. 69 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲಬಹುದು. ಇನ್ನು 32 ಶಾಸಕರನ್ನು ಹೊಂದಿರುವ ಜೆಡಿಎಸ್‌ಗೆ ಕನಿಷ್ಠ 13 ಹೆಚ್ಚಿನ ಶಾಸಕರ ಮತಗಳು ಬೇಕಾಗುತ್ತವೆ. ಆದರೂ ಸಹ ನಾಲ್ಕನೇ ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಜೆಡಿಎಸ್ ಮಾಡಿದೆ. ಈ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದ್ರೆ ದಳಪತಿಗಳು ಯಾರ ಜತೆ ಮೈತ್ರಿ ಮಾಡಿಕೊಳ್ಳಬಹುದು?

Related Video