
Karnataka Election Result 2023: ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ: ಸ್ವರೂಪ್
ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 8 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 8 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಈ ಸಂದರ್ಭದಲ್ಲಿ ಸ್ವರೂಪ್ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದು,ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ. ಭವಾನಿ ಅಕ್ಕಾರವರ ನೇತೃತ್ವದಲ್ಲಿ ಮತ್ತು ಅವರ ಆಶೀರ್ವಾದಿಂದ ಗೆದ್ದಿದ್ದೇನೆ. ಅವರು ನನ್ನ ಮೂರನೇ ಮಗ ಎಂದು ಪ್ರಚಾರ ಮಾಡಿ ಗೆಲ್ಲಿಸಿದ್ದಾರೆ ಎಂದು ಹೇಳಿದರು . ಹಾಘೇ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಗೆಲುವಿಗೆ ಮತದಾರರು ಮತ್ತು ಕಾರ್ಯಕರ್ತರು ಕಾರಣ, ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾರರು ಮತವನ್ನು ಹಾಕಿ ಗೆಲ್ಲಿಸಿದ್ದಾರೆ. ನನ್ನ ಗೆಲುವನ್ನು ಮತದಾರಿಗೆ ಸಮರ್ಪಿಸುತ್ತೇನೆ ಎಂದು ಅಭಿಪ್ರಾಯ ಪಟ್ಟರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ