
karnataka election: ರಾಜ್ಯ ಕುರುಕ್ಷೇತ್ರ ಕದನದಲ್ಲಿ ಅಮಿತ್ ಶಾ ಅಬ್ಬರ,ಮಂಗಳೂರಿನಲ್ಲಿ ಇಂದು 'ಶಾ' ರೋಡ್ ಶೋ
ಕರ್ನಾಟಕ ವಿಧಾನಸಭೆ ಚುನಾವಣೆ ಮೇ10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಈ ಸಂಬಂಧ ಬಿಜೆಪಿ ಅಬ್ಬರದ ಪ್ರಚಾರ ನಡೆಸುತ್ತಿವೆ . ಬಿಜೆಪಿ ರಾಷ್ಟ್ರೀಯ ನಾಯಕರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಚಿವೆ ಸ್ಮೃತಿ ಇರಾನಿ ಹಾಗೂ ಇನ್ನಿತರೆ ನಾಯಕರು ಮತಾಯಾಚಿಸುತ್ತಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಮೇ10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಈ ಸಂಬಂಧ ಬಿಜೆಪಿ ಅಬ್ಬರದ ಪ್ರಚಾರ ನಡೆಸುತ್ತಿವೆ . ಬಿಜೆಪಿ ರಾಷ್ಟ್ರೀಯ ನಾಯಕರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಚಿವೆ ಸ್ಮೃತಿ ಇರಾನಿ ಹಾಗೂ ಇನ್ನಿತರೆ ನಾಯಕರು ಮತಾಯಾಚಿಸುತ್ತಿದ್ದಾರೆ. ಒಬ್ಬಬ್ಬರು ಒಂದೊಂದು ಕಡೆ ಬಂದು ಮತಬೇಟೆಯಲ್ಲಿ ನಿರತರಾಗಿದ್ದು, ದಕ್ಷಿಣ ಕನ್ನಡ , ಕೊಡಗು, ಉಡುಪಿ ಜಿಲ್ಲೆಯಲ್ಲಿ ಅಮಿತ್ ಶಾ ಇಂದು ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ 11ಗಂಟೆಗೆ ಮಡಿಕೇರಿಯಲ್ಲಿ ರೋಡ್ ಶೋ , ಮಧ್ಯಾಹ್ನ 2.30ಕ್ಕೆ ಉಡುಪಿ ಕಟಪಾಡಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ, ಹಾಗೇ ಸಂಜೆ 4ಕ್ಕೆ ಬೈಂದೂರಿನಲ್ಲಿ ರೋಡ್ ಶೋ , ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ