ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ
ಉತ್ತರ ಪ್ರದೇಶದಂತೆ ರಾಜ್ಯದಲ್ಲಿಯೂ ಬದಲಾವಣೆ ಸಾಧ್ಯತೆಯಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ 10 ಕ್ಷೇತ್ರದಿಂದ 73 ಕ್ಷೇತ್ರ ಹೆಚ್ಚಳವಾಗಿದೆ. ಅಮಿತ್ ಶಾ ನೇತೃತ್ವದಲ್ಲಿ ಉತ್ತರ ಪ್ರದೇಶ ಬದಲಾವಣೆ ಆಯ್ತು, ಇದಕ್ಕಿಂತ ದೊಡ್ಡ ಉದಾರಣೆ ಬೇಡ ಅಂದುಕೊಂಡಿದ್ದೇನೆ ಎಂದು ಸಿ.ಟಿ ರವಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ 18ಕ್ಕೆ 18 ಸ್ಥಾನ ಗೆಲ್ಲುವುದು ನಮ್ಮ ಗುರಿ, ಅದಕ್ಕೆ ಬೇಕಾದ ಪೂರಕ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.