ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್, ಪರಾಜಿತ ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್, ಇಲ್ಲಿದೆ ಸಭೆಯ ಇನ್ಫಾರ್ಮೆಶನ್
ಬಿಜೆಪಿ ನಿನ್ನೆ(ಶನಿವಾರ) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳ ಸಭೆ ಮಾಡಿದ್ದು,. ಮುಂಬರುವ ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್ ಮಾಡಿದೆ.
ಬೆಂಗಳೂರು, (ಆಗಸ್ಟ್.21): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಆರೇಳು ತಿಂಗಳುಗಳು ಬಾಕಿ ಇದೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್, ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಎಲೆಕ್ಷನ್‌ಗೆ ಬೇಕಾದ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿವೆ.ಮತ್ತೊಂದೆಡೆ ನಾಯಕರು ಟಿಕೆಟ್‌ಗಾಗಿ ಈಗಿನಿಂದಲೇ ಪೈಪೋಟಿ ನಡೆಸಿದ್ದಾರೆ.
ಬಿಜೆಪಿ ಸಚಿವ ಸೇರಿ ಇಬ್ಬರು ಕಾಂಗ್ರೆಸ್ ಸೇರಲು ಆಸಕ್ತಿ ಹೊಂದಿದ್ದಾರೆ: ಕೆ.ಎನ್.ರಾಜಣ್ಣ
ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಿನ್ನೆ(ಶನಿವಾರ) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳ ಸಭೆ ಮಾಡಿದ್ದು,. ಮುಂಬರುವ ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್ ಮಾಡಿದೆ. ಅದರಲ್ಲೂ ಆಗಲೇ ಟಿಕೆಟ್ ಲೆಕ್ಕಾಚಾರ ಜೋರಾಗಿದ್ದು, ಪರಾಜಿತ ಅಭ್ಯರ್ಥಿಗಳಿಗೆ ಟೆನ್ಶನ್ ಶುರುವಾಗಿದೆ. ಹಾಗಾದ್ರೆ ಏನೆಲ್ಲಾ ಆಯ್ತು ಬಿಜೆಪಿ ಸಭೆಯಲ್ಲಿ ಎನ್ನುವ ಡಿಟೇಲ್ಸ್ ಇಲ್ಲಿದೆ.