ರಾಜ್ಯದಲ್ಲಿ ಶುರುವಾಯ್ತು 'ನಮೋ' ಮಂತ್ರ: ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಲು ಪ್ಲಾನ್
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದೆ.
ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇನಿಯಾ ಶುರುವಾಗಿದ್ದು, ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಭಿವೃದ್ಧಿ ಮಂತ್ರದ ಜೊತೆ ನರೇಂದ್ರ ಮೋದಿ ಎಲೆಕ್ಷನ್ ತಂತ್ರ ರೂಪಿಸುತ್ತಿದ್ದಾರೆ. ಜೆಡಿಎಸ್ ಭದ್ರಕೋಟೆಯನ್ನು ನಮೋ ಛಿದ್ರ ಮಾಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಈ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಗೆದ್ದು, ಮುಂದಿನ ವರ್ಷ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಕಸರತ್ತು ನಡೆಸಿದೆ. ಹಾಗಾಗಿ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.