ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್

ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ತವರಲ್ಲಿ ದಲಿತ ಮತಗಳನ್ನು ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದ್ದು, ಇಂದಿನಿಂದ ಬಿಜೆಪಿ ಎಸ್.ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ.

Share this Video
  • FB
  • Linkdin
  • Whatsapp

ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಿಜೆಪಿ ನಾಯಕರು ಹೆಚ್ಚು ಒತ್ತು ನೀಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ. ಹಳೇ ಮೈಸೂರಿನ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮೀಸಲು ಕ್ಷೇತ್ರಗಳ ಜತೆ ಇತರೆ ಕ್ಷೇತ್ರಗಳ ಮೇಲೆ ಕೂಡ ಬಿಜೆಪಿ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರು ಕೂಡ ರಾಜ್ಯಕ್ಕೆ ಪ್ರವಾಸವನ್ನು ಮಾಡುತ್ತಿದ್ದಾರೆ.

ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟು ಕೊಡಬಾರದು: ...

Related Video