ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ತೇಲಿಬರುತ್ತಿದೆ ವಿಜಯೇಂದ್ರ ಹೆಸರು!

ಏಷ್ಯಾನೆಟ್ ಸುವರ್ಣನ್ಯೂಸ್ ಸಮೀಕ್ಷೆ, ಹಳೇ ಮೈಸೂರಿನಲ್ಲಿ ಜಿದ್ದಾಜಿದ್ದಿ,  ಹಾಸನದಲ್ಲಿ ಜೆಡಿಎಸ್ ಟಿಕೆಟ್ ಗೊಂದಲ, ಗೌಡರ ಕುಟಂಬದಲ್ಲಿ ಕಸಿವಿಸಿ, ಡಿಕೆಶಿ ಯತ್ನಾಳ್ ನಡುವೆ ಮೀಸಲಾತಿ ವಾರ್, ಎಲ್ಲಾ ರದ್ದು ಮಾಡುತ್ತೇವೆ ಎಂದ ಕಾಂಗ್ರೆಸ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಕೋಲಾರದಿಂದಲೂ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಪುತ್ರ ಕ್ಷೇತ್ರ ಹೆಚ್ಚು ಸುರಕ್ಷಿತ ಅನ್ನೋ ಕಾರಣಕ್ಕೆ ಹೈಕಮಾಂಡ್ ವರುಣಾದಲ್ಲಿ ಸ್ಪರ್ಧಿಸಲು ಸೂಚಿಸಿದೆ. ಇದೀಗ ವರುಣಾ ಕ್ಷೇತ್ರದಿಂದ ಬಿಜಪಿ ಅಭ್ಯರ್ಥಿ ಯಾರು? ಈ ಚರ್ಚೆ ಜೋರಾಗಿದೆ. ಇದರ ನಡುವೆ ವರುಣಾದಿಂದ ಬಿವೈ ವಿಜಯೇಂದ್ರಗೆ ಟಿಕೆಟ್ ನೀಡಲು ಹೈಕಮಾಂಡ್ ಒಲವು ತೋರಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಮೂಲಕ ಈ ಬಾರಿ ಸಿದ್ದುಗೆ ತೀವ್ರ ಸ್ಪರ್ಧೆ ನೀಡಲು ಬಿಜೆಪಿ ಮುಂದಾಗಿದೆ. ಇತ್ತ ರಾಜ್ಯ ನಾಯಕರ ಟಾಕ್ ವಾರ್ ಜೋರಾಗಿದೆ. ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲ್ಲ. ಸುಮ್ಮೆ ಬೊಂಬ್ಡಾ ಹೊಡೀತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕೆ ಹೆಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಸ್ವಂತ ಬಲದಲ್ಲಿ ಎರಡು ಸೀಟು ಗೆಲ್ಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video