ಮಂಡ್ಯದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ

ಮಂಡ್ಯ ಜಿಲ್ಲೆಯ ಜೆಡಿಎಸ್‌ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದ್ದು,  ದಳಪತಿಗಳ ಭದ್ರಕೋಟೆ ಛಿದ್ರವಾಗಲಿದೆಯಾ ಎಂಬ ಅನುಮಾನ ಮೂಡಿದೆ.

Share this Video
  • FB
  • Linkdin
  • Whatsapp

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಳಪತಿಗಳಿಗೆ ಪಕ್ಷದ ಭಿನ್ನಮತೀಯರು ತಲೆನೋವಾಗಿ ಪರಿಣಮಿಸಿದ್ದಾರೆ. ಕೆ.ಆರ್‌ ಪೇಟೆ ಹಾಗೂ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಪಕ್ಷಕ್ಕೆ ಬಂಡಾಯದ ಬಿಸಿ ಎದುರಾಗಿದೆ. ಕಳೆದ ಬಾರಿ ಮಂಡ್ಯದ ಎಲ್ಲಾ 7 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಪಕ್ಷದಲ್ಲಿ ಈ ಬಾರಿ ಟಿಕೆಟ್‌ ಘೋಷಣೆ ಬೆನ್ನಲ್ಲೇ ಅಸಮಾಧಾನ ಎದುರಾಗಿದೆ. ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ವೆಂಕಟೇಶ್‌ ತೊಡೆ ತಟ್ಟಿದ್ದು, ಹೆಚ್.ಟಿ ಮಂಜುಗೆ ಟಿಕೆಟ್‌ ಕೊಟ್ಟಿದ್ದಕ್ಕೆ ರೇವಣ್ಣ ಆಪ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ ಹೆಚ್ಚಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video