ಸಂಚಲನ ಸೃಷ್ಟಿಸಿದ ಸಿದ್ದು ಹೇಳಿಕೆ, ಸ್ಪಷ್ಟನೆ ನೀಡಿದ ವಿಪಕ್ಷ ನಾಯಕ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕಾಂಗ್ರೆಸ್‌ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಿಲ್ಲ ಎಂಬ ಹೇಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ  ಸ್ಪಷ್ಟನೆ ನೀಡಿದ್ದಾರೆ.
 

First Published Apr 4, 2023, 2:31 PM IST | Last Updated Apr 4, 2023, 2:31 PM IST

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಮುಖ್ಯಮಂತ್ರಿ ಹುದ್ದೆಗೆ ನಾನು ಆಕಾಂಕ್ಷಿ. ಜತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡ ಆಕಾಂಕ್ಷಿ. ಆದರೆ ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವುದಿಲ್ಲ ಎಂದಿದ್ದರು. ಈ ಬಗ್ಗೆ ವರದಿಗಳು ಪ್ರಕಟವಾಗುತ್ತಿದ್ದಂತೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ಸಿಎಂ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಸಿಎಂ ಆಯ್ಕೆ ಆಗಲಿದೆ ಎಂದು ತಿಳಿಸಿದ್ದಾರೆ.

Video Top Stories