ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್: ಎಚ್‌ಡಿಕೆ
ಕುಟುಂಬದಿಂದ ಯಾರೂ ಸ್ಪರ್ಧಿಸುವ ಪ್ರಶ್ನೆ ಇಲ್ಲ ಎಂದಿರುವ ಎಚ್‌ಡಿಕೆ, ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಎಂದು ಪುನರುಚ್ಛರಿಸಿದ್ದಾರೆ.
ಮೈಸೂರು (ಏ.6): ಹಾಸನ ರಣಕಣದ ವಿಚಾರವಾಗಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಮತ್ತೊಮ್ಮೆ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಮಾತನ್ನು ಪುನರುಚ್ಚಾರ ಮಾಡಿದ್ದಾರೆ. ಅದರೊಂದಿಗೆ ಭವಾನಿ ರೇವಣ್ಣಗೆ ಟಿಕೆಟ್ ಮಿಸ್ಸಾಗೋದು ಗ್ಯಾರಂಟಿ ಎನ್ನಲಾಗುತ್ತಿದೆ.
ಹಾಸನದಲ್ಲಿ ನಮ್ಮ ಕುಟುಂಬದಿಂದ ಸ್ಪರ್ಧೆ ಮಾಡುತ್ತಿಲ್ಲ ಎಂದು ಮೈಸೂರಿನಲ್ಲಿ ನಡೆದ ಪಂಚರತ್ನ ಯಾತ್ರೆಯ ವೇಳೆ ಹೇಳಿದ್ದಾರೆ. ಕಾರ್ಯಕರ್ತರಿಗೆ ಯಾರಿಗೆ ಕೊಡಬೇಕು ಅನ್ನೋದು ಮುಂದೆ ನಿರ್ಧಾರವಾಗುತ್ತದೆ ಎಂದಿದ್ದಾರೆ.
ಹಾಸನ ಕ್ಷೇತ್ರದ ಟಿಕೆಟ್ ಫೈನಲ್ : ಎಚ್‌ಡಿಕೆಯಿಂದ ಮಾಹಿತಿ
ಅನಿತಾ ಕುಮಾರಸ್ವಾಮಿ ಚುನಾವಣೆಗೆ ನಿಂತಿದ್ದು ಅನಿವಾರ್ಯವಾಗಿ, ಈ ಬಾರಿ ಅನಿತಾ ಕುಮಾರಸ್ವಾಮಿಯೂ ಚುನಾವಣೆಗೆ ನಿಲ್ಲೋದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.