'ಕಳ್ಳಕಾಕರ ಜೊತೆ ನಾನು ಹೋಗಲು ಸಾಧ್ಯವಿಲ್ಲ': ಜೆಡಿಎಸ್‌ಗೆ ಬಹುಮತ ನೀಡಿ ಎಂದ ಹೆಚ್‌ಡಿಕೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಬಹುಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
 

Share this Video
  • FB
  • Linkdin
  • Whatsapp

2023ರ ಚುನಾವಣೆಯಲ್ಲಿ ಬಹುಮತ ನೀಡಿದ್ರೆ ಯಾವುದೇ ಪಕ್ಷದ ಜೊತೆ ಹೋಗಲ್ಲ. ಈ ಕಳ್ಳಕಾಕರ ಜೊತೆಗೆ ನಾನು ಹೋಗಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್‌ನಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡು ಕಡೆ ಅನುಭವಿಸಿ ಬಿಟ್ಟಿದ್ದೇನೆ. ನನಗೆ ಅದರ ಅವಶ್ಯಕತೆ ಇಲ್ಲ, ಬಹುಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. 

Related Video