ಕಿತ್ತೂರು ಕರ್ನಾಟಕದಲ್ಲಿ ಅಮಿತ್ ಶಾ ಸಂಚಾರ: ಚಾಣಕ್ಯನ ದಂಡೆಯಾತ್ರೆಯ ಲೆಕ್ಕಾಚಾರ ಏನು?

ಕರ್ನಾಟಕದಲ್ಲಿ ಮತ್ತೊಮ್ಮೆ ಅಮಿತ್‌ ಶಾ ದಂಡೆಯಾತ್ರೆ ಶುರು ಮಾಡಲಿದ್ದು, ಹಳೇ ಮೈಸೂರು ಬಳಿಕ ಕಿತ್ತೂರು ಕರ್ನಾಟಕದಲ್ಲಿ ಸವಾರಿ ಮಾಡಲಿದ್ದಾರೆ.
 

Share this Video
  • FB
  • Linkdin
  • Whatsapp

ರಾಜ್ಯ ವಿಧಾನಸಭಾ ಚುನಾವಣೆಗೆ ಕೇಸರಿ ಪಡೆಯನ್ನು ಬಿಜೆಪಿ ಚಾಣಕ್ಯ ಅಮಿತ್ ಶಾ ಸಿದ್ಧಗೊಳಿಸುತ್ತಿದ್ದು, ಇಂದು ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿಯಲ್ಲಿ ಸಂಚಾರ ಮಾಡಲಿದ್ದಾರೆ. ಉತ್ತರ ಕರ್ನಾಟಕದ ಜತೆ ಕಿತ್ತೂರು ಭಾಗದಲ್ಲಿ ರಣತಂತ್ರ ರೂಪಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ನಾಯಕರ ಜತೆ ಅನೌಪಚಾರಿಕ ಸಭೆ ನಡೆಸಲಿದ್ದು, ಬಿವಿಬಿ ಕಾಲೇಜು ಮಹೋತ್ಸವದಲ್ಲಿ ಅಮಿತ್‌ ಶಾ ಭಾಗಿಯಾಗಲಿದ್ದಾರೆ. ಧಾರವಾಡದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಶಂಕುಸ್ಥಾಪನೆ ನೆರವೇರಿಸಿ, ಕುಂದಗೋಳದಲ್ಲಿ ವಿಜಯಸಂಕಲ್ಪ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಶಂಭು ದೇಗುಲದಲ್ಲಿ ಪೂಜೆ ಸಲ್ಲಿಸಿ ಗೋಡೆ ಬರಹಕ್ಕೆ ಚಾಲನೆ ನೀಡಲಿದ್ದಾರೆ.

Related Video