ಬಳಸೋ ಶಬ್ದದ ಬಗ್ಗೆ ಎಚ್ಚರಿಕೆ ಇರ್ಲಿ, ಸೈಲೆಂಟ್ ಸುನೀಲನಿಗೆ ಅಣ್ಣಾಮಲೈ ವಾರ್ನಿಂಗ್!
ಟಿಕೆಟ್ ತಪ್ಪಿದ್ದಕ್ಕೆ ಬಿಜೆಪಿ ಕಚೇರಿಗೆ ನುಗ್ಗಿ ಸೈಲೆಂಟ್ ಸುನೀಲನ ಅಭಿಮಾನಿಗಳು ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಬೆಂಗಳೂರು (ಏ.13): ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನಿರೀಕ್ಷೆಯಲ್ಲಿದ್ದ ರೌಡಿ ಶೀಟರ್ ಸೈಲೆಂಟ್ ಸುನೀಲನಿಗೆ ನಿರಾಸೆಯಾಗಿದೆ. ಇದರ ಬೆನ್ನಲ್ಲಿಯೇ ಆತನ ಅಭಿಮಾನಿಗಳು ಬಿಜೆಪಿ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದರು.
ಈ ಬಗ್ಗೆ ಗುರುವಾರ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ಪ್ರತಿಭಟನೆ ಮಾಡೋ ಹಕ್ಕು ಎಲ್ಲರಿಗೂ ಇದೆ. ಅದು ಪ್ರಜಾಪ್ರಭುತ್ವವೇ ನೀಡಿದೆ.ಆದರೆ, ಅವರು ಬಳಸೋ ಪದಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ವಾರ್ನಿಂಗ್ ನೀಡಿದ್ದಾರೆ.
ಅಭ್ಯರ್ಥಿ ಭಾಸ್ಕರ್ ರಾವ್ ಬದಲಾವಣೆ ಕೂಗು, ಸೈಲೆಂಟ್ ಸುನೀಲ್ ಬೆಂಬಲಿಗರಿಗೆ ಅಣ್ಣಾಮಲೈ ಸಲಹೆ!
ಚಾಮರಾಜಪೇಟೆಯಲ್ಲಿ ಭಾಸ್ಕರ್ ರಾವ್ ಅವರಿಗೆ ಟಿಕೆಟ್ ನೀಡಿದ್ದಾರೆ. ಹಿಂದೆ ಪೊಲೀಸ್ ಇಲಾಖೆಯಲ್ಲಿ ಕಮೀಷನರ್ ಆಗಿದ್ದವವರು. ಎಲ್ಲರೂ ಅವರನ್ನು ಬೆಂಬಲಿಸಬೇಕು ಎಂದು ಇದೇ ವೇಳೆ ಅಣ್ಣಾಮಲೈ ಮನವಿ ಮಾಡಿದ್ದಾರೆ.