ಬೊಂಬೆ ನಾಡಲ್ಲಿ 'ನಮೋ' ಸಂಚಾರ, ಹಳೆ ಮೈಸೂರು ಭಾಗ ಸೆಳೆಯಲು ಬಿಜೆಪಿ ಪ್ಲಾನ್
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು,ಭರ್ಜರಿ ಪ್ರಚಾರ ಕೈಗೊಂಡಿರುವ ಪ್ರಧಾನಿ ಮೋದಿ ಇಂದು ಕೋಲಾರ, ಚನ್ನಪಟ್ಟಣ, ಬೇಲೂರುಗಳಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. ಹಾಗೇ ಸಂಜೆ ಮೈಸೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು,ಭರ್ಜರಿ ಪ್ರಚಾರ ಕೈಗೊಂಡಿರುವ ಪ್ರಧಾನಿ ಮೋದಿ ಇಂದು ಕೋಲಾರ, ಚನ್ನಪಟ್ಟಣ, ಬೇಲೂರುಗಳಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. ಹಾಗೇ ಸಂಜೆ ಮೈಸೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.ಮಧ್ಯಾಹ್ನ ಮಾಜಿ ಸಿಎಂ H.D.ಕುಮಾರಸ್ವಾಮಿ ಸ್ವಕ್ಷೇತ್ರ ರಾಮನಗರ ಜಿಲ್ಲೆ ಚನ್ನಪಟ್ಟಣಕ್ಕೆ ತೆರಳಿ ಶೆಟ್ಟಿಹಳ್ಳಿಯಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡು ಮತಯಾಚನೆ ಮಾಡಲಿದ್ದಾರೆ. ಇನ್ನು ಶೆಟ್ಟಿಹಳ್ಳಿಯಲ್ಲಿ 30 ಎಕರೆಗೆ ವೇದಿಕೆ ನಿರ್ಮಾಣ ಮಾಡಲಾಗಿದ್ದು, 50,000 ಆಸನ ವ್ಯವಸ್ಥೆ ಮಾಡಲಾಗಿದ್ದು, 1 ಲಕ್ಷ ಜನರು ಸೇರುವ ನಿರೀಕ್ಷೆಗಳಿವೆ. ಅದಲ್ಲದೆ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳಿಬ್ಬರು ಒಕ್ಕಲಿಗರೆ ಆಗಿದ್ದರೆ, ಕಾಂಗ್ರೆಸ್‌ನ ಗಂಗಾಧರ್ ಗಂಗಾಮತಸ್ಥ ಸಮುದಾಯಕ್ಕೆ ಸೇರಿದ್ದಾರೆ. ಹೀಗಾಗಿ ಒಕ್ಕಲಿಗ ಮತಗಳೇ ನಿರ್ಣಾಯಕವಾದ ಈ ಕ್ಷೇತ್ರದಲ್ಲಿಅಲ್ಪಸಂಖ್ಯಾತ ಮತಗಳು ಸಹ ಅದೃಷ್ಟ ಬದಲಿಸುವ ಸಾಧ್ಯತೆಗಳಿವೆ. ಹೀಗಾಗಿ ಅಲ್ಪಸಂಖ್ಯಾತರ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಚನ್ನಪಟ್ಟಣದಲ್ಲಿ ಗೆಲ್ಲಲು ಪ್ಲಾನ್ ಮಾಡಿದೆ.