ಶೆಟ್ಟರ್‌ ಬದಲಾಯಿಸಲು ತೀರ್ಮಾನಿಸಿದ್ದೇ ಮೋದಿ, ಅಮಿತ್‌ ಶಾ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಶೆಟ್ಟರ್‌  ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರೇ ತೀರ್ಮಾನ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ

Share this Video
  • FB
  • Linkdin
  • Whatsapp

ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಶೆಟ್ಟರ್‌ ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರೇ ತೀರ್ಮಾನ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್‌ ತಪ್ಪಿಸಿರುವ ವಿಷಯ ಪ್ರಧಾನಿ ಹಾಗೂ ಅಮಿತ್‌ ಶಾ ಗಮನಕ್ಕಿಲ್ಲ ಎಂದು ಜಗದೀಶ ಶೆಟ್ಟರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್‌ ಬಿ.ಎಲ್‌ ಸಂತೋಷ್‌ ಮೇಲೆ ಗೋಬೆ ಕೂರಿಸ್ತಿದ್ದಾರೆ, ಅವರಿಗೆ ಟಿಕೆಟ್‌ ನೀಡದಿರುವುದು ಮೋದಿ ಮಟ್ಟದಲ್ಲಿ ನಿರ್ಧಾರವಾಗಿದೆ. ಜಗದೀಶ್‌ ಶೆಟ್ಟರ್‌ ಹೋಗಿರುವುದರಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಹಳೇ ಪ್ಲೇಯರ್ ರಿಟೈರ್ಡ್ ಆಗಿ ಅಂದಿದ್ದೇವು. ಆದರೆ ಅವರು ಮತ್ತೊಂದು ಟೀಮ್ ನಲ್ಲಿ ಆಡೋಕೆ ಹೋಗಿದ್ದಾರೆ. ಆದರೂ ಈ ಸಲ ಕಪ್ ನಮ್ದೇ ಎಂದು ಜಗದೀಶ್‌ ಶೆಟ್ಟರ್ ವಿರುದ್ಧ ವ್ಯಂಗ್ಯವಾಗಿ ಪ್ರಲ್ಹಾದ ಜೋಶಿ ಹೇಳಿದರು .

Related Video