Pratham Paryatane:ನಿಖಿಲ್ ಕುಮಾರಸ್ವಾಮಿ ಗೆಲ್ಲುತ್ತಾರೆ: ಇದು ರಾಮನಗರ ಜನರ ಮನದಾಳದ ಮಾತು
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ರಾಮನಗರ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
ರಾಮನಗರ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಪ್ರಸ್ತುತ ರಾಜಕೀಯ ಸ್ಥಿತಿಗತಿ ಕುರಿತು ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ರಾಮನಗರ ಕ್ಷೇತ್ರವನ್ನು ಅನಿತಾ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗೆ ಬಿಟ್ಟು ಕೊಟ್ಟಿದ್ದಾರೆ. ನಿಖಿಲ್ ಗೆಲ್ಲುತ್ತಾರೆ. ಕುಮಾರಸ್ವಾಮಿ ಗೆಲ್ಲಬೇಕು, ಅವರು ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಎಂದು ಕ್ಷೇತ್ರದ ಜನತೆ ತಿಳಿಸಿದ್ದಾರೆ. ಅವರು ಸಮಸ್ಯೆಗೆ ಸ್ಪಂದಿಸುತ್ತಾರೆ, ಹಾಗಾಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು. ಜೆಡಿಎಸ್ ಗೆಲ್ಲುತ್ತದೆ ಎಂದು ತಿಳಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಮೇಲೆ ಕೆಲವು ಅಸಮಧಾನವಿತ್ತು, ಬೇಗ ಸಿಗಲ್ಲ ಎನ್ನುವ ಅಪಪ್ರಚಾರವಿತ್ತು. ಆದರೆ ಹೋದವರಿಗೆ ಎಲ್ಲಾ ಚೆನ್ನಾಗೆ ಸ್ಪಂದಿಸಿದ್ದಾರೆ. ಊರಿನಿಂದ ಒಂದು ಕಾರ್ಯಕ್ರಮಕ್ಕೆ ಹೋಗಿದ್ದಾಗ ನಿಖಿಲ್ ಕುಮಾರಸ್ವಾಮಿ ಸ್ಪಂದಿಸಿದ್ದಾರೆ ಎಂದು ರಾಮನಗರ ಗ್ರೌಂಡ್ ರಿಪೋರ್ಟ್‌ನಲ್ಲಿ ಜನರು ಅಭಿಪ್ರಾಯ ಪಟ್ಟಿದ್ದಾರೆ.