ಎರಡನೇ ಪಟ್ಟಿಯಲ್ಲಿ ಹೆಸರು ಇರುತ್ತಾ? ಇಲ್ವಾ? ಅಖಂಡ ಶ್ರೀನಿವಾಸ್ ಮೂರ್ತಿಗೆ ಅಡ್ಡಿಯಾದವರು ಯಾರು?
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. 100 ಕ್ಷೇತ್ರಗಳ ಟಿಕೆಟ್ ಹಂಚಿಕೆ ವಿಚಾರ ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದು, ಪುಲಕೇಶಿನಗರ ಕ್ಷೇತ್ರದ ಟಿಕೆಟ್
ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಸಿಗುತ್ತಾ ನೋಡಬೇಕಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ರಿಲೀಸ್ ಮಾಡಿದೆ. 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದ್ದು, 100 ಕ್ಷೇತ್ರಗಳ ಟಿಕೆಟ್ ಹಂಚಿಕೆ ವಿಚಾರ ಕಗ್ಗಂಟಾಗಿದೆ. ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಬೆನ್ನಲ್ಲೇ ಡಾ.ಜಿ ಪರಮೇಶ್ವರ್ ಕೂಡ ನನಗೂ 2 ಕ್ಷೇತ್ರಗಳಲ್ಲಿ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.ಬೆಂಗಳೂರಿನ ಪುಲಕೇಶಿನಗರ ಕ್ಷೇತ್ರದ ಟಿಕೆಟ್ ನೀಡುವಂತೆ ಇತ್ತಾಯಿಸಿದ್ದಾರೆ ಹೀಗಾಗಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಕೈ ಟಿಕೆಟ್ ಸಿಗುತ್ತಾ ಎನ್ನುವ ಪ್ರಶ್ನೆ ಕಾಡಿದೆ. ಅದಲ್ಲದೆ ಅಖಂಡ ಶ್ರೀನಿವಾಸ್ ಮೂರ್ತಿಗೆ ಟಿಕೆಟ್ ಕೊಟ್ಟರೆ ಅವರ ಪರವಾಗಿ ಕೆಲಸಮಾಡಲ್ಲ ಎಂದು ಮುಸ್ಲಿಂ ಧರ್ಮ ಗುರು ಹೈಕಮಾಂಡ್‌ಗೆ ತಿಳಿಸಿದ್ದಾರೆ, ಹಾಗೇ ಕಾಂಗ್ರೆಸ್ ಪರವಾಗಿ ಕೆಲಸ ಮಾಡಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.